ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಲ್ಲಿಕೆಯಾಗಿದ್ದ ದೂರಿನ ಅರ್ಜಿ ವಿಚಾರಣೆಯಲ್ಲಿ ಆಗಸ್ಟ್.20ಕ್ಕೆ ಮುಂದೂಡಲಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ದೂರಿನ ಅರ್ಜಿ ಕುರಿತು ವಿಚಾರಣೆ ನಡೆಸಲಾಯಿತು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಆಗಸ್ಟ್.20ರಂದು ಅರ್ಜಿ ವಿಚಾರಣೆ ಸ್ವೀಕರಿಸುವ ಕುರಿತು ಆದೇಶ ಹೊರಡಿಸುವುದಾಗಿ ತಿಳಿಸಿ ವಿಚಾರಣೆಯನ್ನು ಆಗಸ್ಟ್.20ಕ್ಕೆ ಮುಂದೂಡಿಕೆ ಮಾಡಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಬೆನ್ನು ಬಿದ್ದಿದ್ದು, ಕೋರ್ಟ್ ತೀರ್ಪಿನ ಬಳಿಕವೇ ಮುಂದಿನ ಹೋರಾಟ ಹೇಗಿರಲಿದೆ ಎಂಬ ವಿಚಾರ ಚರ್ಚೆಯಾಗುತ್ತಿವೆ.
ಒಂದು ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದರೆ ಕಾಂಗ್ರೆಸ್ ನಾಯಕರು ಮುಂದಿನ ಹೋರಾಟದ ಬಗ್ಗೆ ಈಗಾಗಲೇ ಚರ್ಚೆ ನಡೆಸಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ.