Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮೈಸೂರು ಮುಡಾ ಹಗರಣ: ಇಂದು ಸಿಎಂ ಅರ್ಜಿ ಮತ್ತೆ ವಿಚಾರಣೆ

ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್‌ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆ.

ರಾಜ್ಯ ಸರ್ಕಾರದ ಪರ ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ವಾದ ಮಂಡಿಸಲಿದ್ದಾರೆ. ಇದಲ್ಲದೇ ಸೆಪ್ಟೆಂಬರ್‌ 12ರಂದು ವಾರದ ಸರಣಿ ಮುಂದುವರಿಯಲಿದೆ. ಅಂದು ಸಿಎಂ ಪರ ಅಭಿಷೇಕ್‌ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್‌ ಆದೇಶ ನೀಡುವ ಎಲ್ಲಾ ಸಾಧ್ಯತೆ ಕಡಿಮೆಯಿದೆ ಎನ್ನಲಾಗಿದೆ.

ಇನ್ನು ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ಇದೇ ಸೆಪ್ಟೆಂಬರ್‌ 2ರಂದು ವಿಚಾರಣೆ ನಡೆಸಿದ್ದ ಕೋರ್ಟ್‌ 2ನೇ ಬಾರಿಗೆ ಮುಂದೂಡಿಕೆ ಮಾಡಿತ್ತು.

ಗಣೇಶ ಹಬ್ಬದ ಬಳಿಕ ಅಂದರೆ ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

Tags: