Mysore
20
overcast clouds
Light
Dark

ಗೋಲ್ಮಾಲ್‌ ಸಿಎಂ 4000 ಕೋಟಿ ಗುಳುಂ ಎಂದ ಪ್ರತಿಪಕ್ಷ ನಾಯಕ ಆರ್.ಅಶೋಕ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಗೋಲ್ಮಾಲ್‌ ಸಿಎಂ 4000 ಕೋಟಿ ಗುಳುಂ ಎಂದು ಟ್ವೀಟ್‌ ಮಾಡಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನು ಗುಳುಂ ಮಾಡಿರುವ ಸಿದ್ಧಹಸ್ತರು ಈಗ ಮೈಸೂರಿನ ಮುಡಾದಲ್ಲಿ 4000 ಕೋಟಿ ರೂಪಾಯಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ ಕೈಚಳಕ ಪ್ರದರ್ಶನ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಗೋಲ್ಮಾಲ್‌ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಧರ್ಮಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನು ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ.? ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನು ಅಮಾನತು ಮಾಡದೇ, ಕೇವಲ ವರ್ಗಾವಣೆ ಮಾಡಿ ಕೈತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟ್ಟಿದ್ದೀರಿ ಎಂದು ಸಿದ್ದರಾಮಯ್ಯರಿಗೆ ಪ್ರಶ್ನಿಸಿದ್ದಾರೆ.

ಸಚಿವ ಸಂಪುಟದ ಅನುಮತಿ ಪಡೆಯದೇ ಮನಸ್ಸಿಗೆ ಬಂದಂತೆ ನಿವೇಶನ ನೀಡಲು ಅನುಮತಿ ನೀಡಿದ್ದು ಯಾರು.? ನಿಮ್ಮ ತವರು ಜಿಲ್ಲೆಯಲ್ಲಿ ಸ್ವಂತ ಊರಿನಲ್ಲಿ ತಮ್ಮ ಆಪ್ತ ಸಚಿವರ ಇಲಾಖೆಯಲ್ಲಿ ಇಂಥದ್ದೊಂದು ಬೃಹತ್‌ ಹಗರಣ ತಮ್ಮ ಗಮನಕ್ಕೆ ಬಾರದೇ, ತಮ್ಮ ಕೈವಾಡವಿಲ್ಲದೇ ನಡೆಯಲು ಸಾಧ್ಯವೇ ಎಂದು ಅಶೋಕ್‌ ಪ್ರಶ್ನಿಸಿದ್ದಾರೆ.