ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಗೋಲ್ಮಾಲ್ ಸಿಎಂ 4000 ಕೋಟಿ ಗುಳುಂ ಎಂದು ಟ್ವೀಟ್ ಮಾಡಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನು ಗುಳುಂ ಮಾಡಿರುವ ಸಿದ್ಧಹಸ್ತರು ಈಗ ಮೈಸೂರಿನ ಮುಡಾದಲ್ಲಿ 4000 ಕೋಟಿ ರೂಪಾಯಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ ಕೈಚಳಕ ಪ್ರದರ್ಶನ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.
ಗೋಲ್ಮಾಲ್ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಧರ್ಮಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನು ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ.? ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನು ಅಮಾನತು ಮಾಡದೇ, ಕೇವಲ ವರ್ಗಾವಣೆ ಮಾಡಿ ಕೈತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟ್ಟಿದ್ದೀರಿ ಎಂದು ಸಿದ್ದರಾಮಯ್ಯರಿಗೆ ಪ್ರಶ್ನಿಸಿದ್ದಾರೆ.
ಸಚಿವ ಸಂಪುಟದ ಅನುಮತಿ ಪಡೆಯದೇ ಮನಸ್ಸಿಗೆ ಬಂದಂತೆ ನಿವೇಶನ ನೀಡಲು ಅನುಮತಿ ನೀಡಿದ್ದು ಯಾರು.? ನಿಮ್ಮ ತವರು ಜಿಲ್ಲೆಯಲ್ಲಿ ಸ್ವಂತ ಊರಿನಲ್ಲಿ ತಮ್ಮ ಆಪ್ತ ಸಚಿವರ ಇಲಾಖೆಯಲ್ಲಿ ಇಂಥದ್ದೊಂದು ಬೃಹತ್ ಹಗರಣ ತಮ್ಮ ಗಮನಕ್ಕೆ ಬಾರದೇ, ತಮ್ಮ ಕೈವಾಡವಿಲ್ಲದೇ ನಡೆಯಲು ಸಾಧ್ಯವೇ ಎಂದು ಅಶೋಕ್ ಪ್ರಶ್ನಿಸಿದ್ದಾರೆ.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…