Mysore
21
mist

Social Media

ಶನಿವಾರ, 13 ಡಿಸೆಂಬರ್ 2025
Light
Dark

ಮೈಸೂರು ಮುಡಾ ಹಗರಣ: ಅಕ್ರಮ ನಿವೇಶನ ಹಂಚಿಕೆಗೆ 22.47 ಕೋಟಿ ಲಂಚ ಪಡೆದಿದ್ದ ದಿನೇಶ್‌ ಕುಮಾರ್‌

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯಲ್ಲಿ ಹಲವು ಮಹತ್ವದ ಮಾಹಿತಿಗಳು ಬಯಲಾಗಿವೆ.

ಮುಡಾ ಹಗರಣದ ಸೂತ್ರಧಾರಿಯೇ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ತನ್ನ ಅಧಿಕಾರಾವಧಿಯಲ್ಲಿ 140 ಕೋಟಿ ಮೌಲ್ಯದ 283 ನಿವೇಶನಗಳನ್ನು ಅಕ್ರಮವಾಗಿ ಮಂಜೂರು ಮಾಡಿದ್ದರು.

ಅಕ್ರಮವಾಗಿ ನಿವೇಶನ ಮಂಜೂರು ಮಾಡಲು 22.47 ಕೋಟಿ ಲಂಚ ಪಡೆದಿದ್ದರು ಎಂಬುದು ಇಡಿ ತನಿಖೆಯಿಂದ ಬಹಿರಂಗವಾಗಿದೆ. ಅಕ್ರಮವಾಗಿ ನಿವೇಶನ ಹಂಚಿಕೆ ಮಾಡಲು ಅವರು ನಗದು, ಚರ, ಸ್ಥಿರ ಆಸ್ತಿಗಳ ರೂಪದಲ್ಲಿ ಲಂಚ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Tags:
error: Content is protected !!