ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ 100 ಕೋಟಿ ರೂ ಮೌಲ್ಯದ 92 ಆಸ್ತಿಗಳನ್ನು ಜಪ್ತಿ ಮಾಡಿದೆ.
ಈ ಮೂಲಕ ಮುಡಾದಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವುದು ದೃಢಪಟ್ಟಿದ್ದು, ಸದ್ಯ ಮುಡಾ ಕೇಸ್‌ನ ತನಿಖೆ ಮುಂದುವರಿದಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜಾರಿ ನಿರ್ದೇಶನಾಲಯ, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ ಮೌಲ್ಯದ 92 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿದೆ.
ಈ ಆಸ್ತಿಗಳನ್ನು ವಸತಿ ಸಹಕಾರಿ ಸಂಘ ಹಾಗೂ ಮುಡಾ ಅಧಿಕಾರಿಗಳು ಸೇರಿದಂತೆ ಪ್ರಭಾವಿ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ತಿಳಿಸಿದೆ.
ಲೋಕಾಯುಕ್ತ ಎಫ್‌ಐಆರ್ ಆಧಾರದ ಮೇಲೆ ತನಿಖೆ ಆರಂಭಿಸಿದ್ದ ಇಡಿ ಕೋಟ್ಯಾಂತರ ಸ್ಥಿರ ಆಸ್ತಿಗಳನ್ನು ವಶಪಡಿಸಿಕೊಂಡಿದ್ದು, ಮುಡಾ ಹಗರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದಂತಾಗಿದೆ.





