ನವದೆಹಲಿ: ಮೈಸೂರು ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲು ಮಾಡಿದೆ.
ಮೈಸೂರು ಲೋಕಾಯುಕ್ತ ಎಫ್‌ಐಆರ್‌ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ ಇಸಿಐಆರ್ ದಾಖಲು ಮಾಡಿದ್ದು, ಇದರಲ್ಲಿ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರುಗಳ ಬಗ್ಗೆಯೂ ಉಲ್ಲೇಖವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಾಲ್ವರು ಕೂಡ ಪ್ರಮುಖ ಆರೋಪಿಗಳೇ ಎಂದು ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲು ಮಾಡಿದ್ದು, ನಾಲ್ವರನ್ನು ವಿಚಾರಣೆ ನಡೆಸಲು ಸಮನ್ಸ್ ನೀಡುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಾದರೂ ಸಿಎಂ ಸಿದ್ದರಾಮಯ್ಯ ಮನೆಗೆ ಇ.ಡಿ ದಾಳಿ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.