ಬೆಂಗಳೂರು: ಮೈಸೂರು ಮುಡಾದಲ್ಲಿ ಭಾರೀ ಅಕ್ರಮ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಮೈಸೂರು ಮುಡಾ ಹಗರಣ ದಿನದಿಂದ ದಿನಕ್ಕೆ ತೀವ್ರ ಕಾವು ಪಡೆದುಕೊಳ್ಳುತ್ತಿದ್ದು, ರಾಜ್ಯದಲ್ಲಿ ಮತ್ತಷ್ಟು ಚರ್ಚಾ ವಿಷಯವಾಗಿ ಹೊರಹೊಮ್ಮಿದೆ.
ಈಗ ಮಾಜಿ ಮುಡಾ ಆಯುಕ್ತ ನಟೇಶ್‌ರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಕಚೇರಿಗೆ ಕರೆದೊಯ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಟೇಶ್ ಅವರು ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ಕಚೇರಿಗೆ ಕರೆದೊಯ್ದಿದ್ದು, ನಟೇಶ್‌ರನ್ನು ಬಂಧಿಸುವ ಸಾಧ್ಯತೆಯಿದೆ.
ಇನ್ನು ನಟೇಶ್ ಮನೆ ಮೇಲೆ ನಿನ್ನೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಮನೆಯಲ್ಲಿ ಹಲವು ದಾಖಲಾತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದ್ದು, ತನಿಖೆಗೆ ನಟೇಶ್ ಸಹಕರಿಸಿಲ್ಲ ಎನ್ನಲಾಗಿದೆ.
ಆದ್ದರಿಂದ ಇಂದು ನಟೇಶ್‌ರನ್ನು ವಶಕ್ಕೆ ಪಡೆದುಕೊಂಡು ಬಂಧಿಸುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.