Mysore
20
overcast clouds
Light
Dark

ಮೈಸೂರು ಪೇಪರ್‌ ಮಿಲ್ಸ್‌ ಮತ್ತೆ ಪುನರಾರಂಭ: ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಹಣಕಾಸಿನ ಸಮಸ್ಯೆಯಿಂದ ಕಳೆದ 2015ರಲ್ಲಿ ಸ್ಥಗಿತಗೊಂಡಿದ್ದ ಮೈಸೂರು ಪೇಪರ್‌ ಮಿಲ್ಸ್‌ ಅನ್ನು ಮತ್ತೆ ಪುನರಾರಂಭ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಅವರು, ಹಣಕಾಸಿನ ಸಮಸ್ಯೆಯಿಂದ ಕಳೆದ 2015ರಲ್ಲಿ ಮೈಸೂರು ಪೇಪರ್‌ ಮಿಲ್ಸ್‌ ಅನ್ನು ಸ್ಥಗಿತ ಮಾಡಲಾಗಿತ್ತು. ಆದರೆ ಇದನ್ನು ಪುನರಾರಂಭ ಮಾಡಲು ಸರ್ಕಾರ ಚಿಂತನೆ ನಡೆಸಿದ್ದು, ಖಾಸಗಿಯವರ ಸಹಭಾಗಿತ್ವದಲ್ಲಿ ಪುನರಾರಂಭ ಮಾಡುತ್ತೇವೆ ಎಂದು ಸಚಿವರು ಹೇಳಿದ್ದಾರೆ.

ಇನ್ನೂ ಮುಂದುವರಿದು ಮಾತನಾಡಿದ ಸಚಿವ ಎಂ.ಬಿ.ಪಾಟೀಲ್‌ ಅವರು, ಕಾಗದ ಕಾರ್ಖಾನೆಗೆ ನೀಲಗಿರಿ ಅವಶ್ಯಕತೆ ಇದೆ. ಆದ್ರೆ ನಮ್ಮಲ್ಲಿ ನೀಲಗಿರಿ ಬೆಳೆಯಲು ನಿಷೇಧ ಇದೆ. ಹೀಗಾಗಿ ಯಾವ ಖಾಸಗಿಯವರು ಕೂಡ ಮುಂದೆ ಬರುತ್ತಿಲ್ಲ. ಆದ್ರೆ ನಾವು ಮೈಸೂರು ಪೇಪರ್‌ ಮಿಲ್ಸ್‌ ಕಾರ್ಖಾನೆ ಪುನರಾರಂಭ ಮಾಡಲು ಉತ್ಸುಕರಾಗಿದ್ದೇವೆ ಎಂದರು.

ಇನ್ನೂ ಅರಣ್ಯ ಇಲಾಖೆಯ ತಜ್ಞರ ಸಮಿತಿಯು ನೀಲಗಿರಿ ಬೆಳೆಯಲು ಕಾರ್ಖಾನೆಗೆ ವಿನಾಯಿತಿ ನೀಡುವ ಸಂಬಂಧ ಪರಿಶೀಲನೆ ನಡೆಸಿ ಆ ವರದಿ ನೀಡಬೇಕು. ಬಳಿಕ ಕಂಪನಿಯ ಸಾಲ, ಬಾಕಿ ಕುರಿತು ಆರ್ಥಿಕ ಇಲಾಖೆ ಜೊತೆ ಸಮಾಲೋಚನೆ ನಡೆಸಲಾಗುತ್ತದೆ. ಸಮಾಲೋಚನೆ ಬಳಿಕ ಎಲ್ಲಾ ವಿಷಯಗಳ ಬಗ್ಗೆ ನಿರ್ಧಾರ ಆದಮೇಲೆ ಕಾರ್ಖಾನೆ ಪ್ರಾರಂಭದ ಬಗ್ಗೆ ಸೂಕ್ತ ಕ್ರಮ ವಹಿಸುತ್ತೇವೆ ಎಂದು ಭರವಸೆ ನೀಡಿದರು.