ಬೆಂಗಳೂರು: ಹಣಕಾಸಿನ ಸಮಸ್ಯೆಯಿಂದ ಕಳೆದ 2015ರಲ್ಲಿ ಸ್ಥಗಿತಗೊಂಡಿದ್ದ ಮೈಸೂರು ಪೇಪರ್ ಮಿಲ್ಸ್ ಅನ್ನು ಮತ್ತೆ ಪುನರಾರಂಭ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು, ಹಣಕಾಸಿನ ಸಮಸ್ಯೆಯಿಂದ ಕಳೆದ 2015ರಲ್ಲಿ ಮೈಸೂರು ಪೇಪರ್ ಮಿಲ್ಸ್ ಅನ್ನು ಸ್ಥಗಿತ ಮಾಡಲಾಗಿತ್ತು. ಆದರೆ ಇದನ್ನು ಪುನರಾರಂಭ ಮಾಡಲು ಸರ್ಕಾರ ಚಿಂತನೆ ನಡೆಸಿದ್ದು, ಖಾಸಗಿಯವರ ಸಹಭಾಗಿತ್ವದಲ್ಲಿ ಪುನರಾರಂಭ ಮಾಡುತ್ತೇವೆ ಎಂದು ಸಚಿವರು ಹೇಳಿದ್ದಾರೆ.
ಇನ್ನೂ ಮುಂದುವರಿದು ಮಾತನಾಡಿದ ಸಚಿವ ಎಂ.ಬಿ.ಪಾಟೀಲ್ ಅವರು, ಕಾಗದ ಕಾರ್ಖಾನೆಗೆ ನೀಲಗಿರಿ ಅವಶ್ಯಕತೆ ಇದೆ. ಆದ್ರೆ ನಮ್ಮಲ್ಲಿ ನೀಲಗಿರಿ ಬೆಳೆಯಲು ನಿಷೇಧ ಇದೆ. ಹೀಗಾಗಿ ಯಾವ ಖಾಸಗಿಯವರು ಕೂಡ ಮುಂದೆ ಬರುತ್ತಿಲ್ಲ. ಆದ್ರೆ ನಾವು ಮೈಸೂರು ಪೇಪರ್ ಮಿಲ್ಸ್ ಕಾರ್ಖಾನೆ ಪುನರಾರಂಭ ಮಾಡಲು ಉತ್ಸುಕರಾಗಿದ್ದೇವೆ ಎಂದರು.
ಇನ್ನೂ ಅರಣ್ಯ ಇಲಾಖೆಯ ತಜ್ಞರ ಸಮಿತಿಯು ನೀಲಗಿರಿ ಬೆಳೆಯಲು ಕಾರ್ಖಾನೆಗೆ ವಿನಾಯಿತಿ ನೀಡುವ ಸಂಬಂಧ ಪರಿಶೀಲನೆ ನಡೆಸಿ ಆ ವರದಿ ನೀಡಬೇಕು. ಬಳಿಕ ಕಂಪನಿಯ ಸಾಲ, ಬಾಕಿ ಕುರಿತು ಆರ್ಥಿಕ ಇಲಾಖೆ ಜೊತೆ ಸಮಾಲೋಚನೆ ನಡೆಸಲಾಗುತ್ತದೆ. ಸಮಾಲೋಚನೆ ಬಳಿಕ ಎಲ್ಲಾ ವಿಷಯಗಳ ಬಗ್ಗೆ ನಿರ್ಧಾರ ಆದಮೇಲೆ ಕಾರ್ಖಾನೆ ಪ್ರಾರಂಭದ ಬಗ್ಗೆ ಸೂಕ್ತ ಕ್ರಮ ವಹಿಸುತ್ತೇವೆ ಎಂದು ಭರವಸೆ ನೀಡಿದರು.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…