ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಬಳಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, ಪೊಲೀಸರ ವಿರುದ್ಧವೇ ಗರಂ ಆಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ಯಕೋಮಿನ ಜನರು ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮುಂದೆ ಕಲ್ಲು ತೂರಾಟ ನಡೆಸಿದ್ದಲ್ಲದೇ ಹಲವು ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದರು. ಗಂಭೀರ ಗಾಯಗೊಂಡ ಪೊಲೀಸರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು, ಪೊಲೀಸರಿಗೆ ಮಿನಿಮಮ್ ಕಾಮನ್ ಸೆನ್ಸ್ ಇಲ್ವಾ? ಯಾರೋ ಆರ್‌ಎಸ್‌ಎಸ್‌ನವನು ಈ ಕೃತ್ಯ ಮಾಡಿದ್ದಾನೆ. ಆತನ ಮೇಲೆ ಕೇಸ್ ಆಗಿದೆ ಅರೆಸ್ಟ್ ಆಗಿದ್ದಾನೆ. ಪೊಲೀಸರು ಆತನನ್ನು ಏಕೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಇಟ್ಟರು ಎಂದು ಪ್ರಶ್ನೆ ಮಾಡಿದರು.





