ರಾಜ್ಯ

ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ: ಪೊಲೀಸರ ವಿರುದ್ಧ ಗರಂ ಆದ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಬಳಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, ಪೊಲೀಸರ ವಿರುದ್ಧವೇ ಗರಂ ಆಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ಯಕೋಮಿನ ಜನರು ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಮುಂದೆ ಕಲ್ಲು ತೂರಾಟ ನಡೆಸಿದ್ದಲ್ಲದೇ ಹಲವು ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದರು. ಗಂಭೀರ ಗಾಯಗೊಂಡ ಪೊಲೀಸರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು, ಪೊಲೀಸರಿಗೆ ಮಿನಿಮಮ್‌ ಕಾಮನ್‌ ಸೆನ್ಸ್‌ ಇಲ್ವಾ? ಯಾರೋ ಆರ್‌ಎಸ್‌ಎಸ್‌ನವನು ಈ ಕೃತ್ಯ ಮಾಡಿದ್ದಾನೆ. ಆತನ ಮೇಲೆ ಕೇಸ್‌ ಆಗಿದೆ ಅರೆಸ್ಟ್‌ ಆಗಿದ್ದಾನೆ. ಪೊಲೀಸರು ಆತನನ್ನು ಏಕೆ ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಇಟ್ಟರು ಎಂದು ಪ್ರಶ್ನೆ ಮಾಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ | ಚಲನ ಚಿತ್ರದ ಅಶ್ಲೀಲ ಸಾಹಿತ್ಯ ನಿಷೇಧಿಸಿ

ಕನ್ನಡ ಚಲನಚಿತ್ರಗಳು ಭಾರತೀಯ ಸಿನಿರಂಗದಲ್ಲಿ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿವೆ. ಎಪ್ಪತ್ತು, ಎಂಬತ್ತರ ದಶಕದಲ್ಲಿ ತೆರೆ ಕಂಡ ಚಿತ್ರಗಳ ಹಾಡುಗಳು…

41 mins ago

ಓದುಗರ ಪತ್ರ | ಹೆಚ್ಚುವರಿ ಬಸ್‌ ಸೌಲಭ್ಯ ಕಲ್ಪಿಸಿ

ಸರಗೂರು ಹಾಗೂ ಎಚ್‌.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಸರಿಯಾದ ಸಮಯಕೆ…

52 mins ago

ಓದುಗರ ಪತ್ರ | ಕೆರೆಗಳ ಉಳಿವಿಗೆ ಜಿಯೋ ಫೆನ್ಸಿಂಗ್ ಕಡ್ಡಾಯಗೊಳಿಸಿ

ರಾಜ್ಯದ ಜಲಮೂಲಗಳ ಸ್ಥಿತಿ ಇಂದು ಶೋಚನೀಯವಾಗಿದೆ. ಅಂಕಿ-ಅಂಶಗಳ ಪ್ರಕಾರ ಕಳೆದ ಎರಡು ದಶಕಗಳಲ್ಲಿ ಅತಿಕ್ರಮಣದಿಂದಾಗಿ ನಗರ ಪ್ರದೇಶದ ಕೆರೆಗಳ ವಿಸ್ತೀರ್ಣ…

57 mins ago

ಓದುಗರ ಪತ್ರ | ನೀರು ಪೋಲು ಮಾಡದಂತೆ ಜಾಗೃತಿ ಮೂಡಿಸಿ

ಬೇಸಿಗೆಯ ತಾಪ ಹೆಚ್ಚಾದಂತೆ ರಾಜ್ಯದ ಹಲವೆಡೆ ಜನರು ಒಂದು ಬಿಂದಿಗೆ ನೀರಿಗಾಗಿ ವಾರಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಹೀಗಿರುವಾಗ, ಮೈಸೂರು…

1 hour ago

ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರ ರಾಜೀನಾಮೆಗೆ ಬಿಗಿಪಟ್ಟು

ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರ ರಾಜೀನಾಮೆಗೆ ಬಿಗಿಪಟ್ಟು • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ತಾಲ್ಲೂಕು ವೀರಶೈವ ಲಿಂಗಾಯತ ಮಹಾ…

1 hour ago

ಅಪಘಾತದಿಂದ ಹೊತ್ತಿ ಉರಿದ ಟಿಪ್ಪರ್‌, ಬಸ್‌ : 14 ಮಂದಿ ಸಜೀವ ದಹನ

ಹೈದರಾಬಾದ್ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ,…

1 hour ago