ರಾಜ್ಯ

ಉದಯಗಿರಿ ಗಲಭೆ ಪ್ರಕರಣ: ಆರೋಪಿಗಳ ವಿರುದ್ಧ ಮುಲಾಜಿಲ್ಲದೇ ಕ್ರಮ ಎಂದ ಪರಮೇಶ್ವರ್‌

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ನಡೆದಿದ್ದ ಕಲ್ಲು ಎಸೆತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ವಿವಾದಿತ ಪೋಸ್ಟ್‌ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ 15ಕ್ಕೂ ಹೆಚ್ಚು ಪೊಲೀಸರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಪ್ರಕರಣದ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದು ಕೃತ್ಯ ಎಸಗಿದ್ದಾರೆ. ಠಾಣೆ ಮೇಲೆ ಕಲ್ಲು ಎಸೆದವರನ್ನು ಸುಮ್ಮನೇ ಬಿಡುವ ಮಾತೇ ಇಲ್ಲ. ಆರೋಪಿಗಳ ಬಂಧನಕ್ಕೆ ಸೂಚನೆ ನೀಡಿದ್ದೇನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದರಲ್ಲಿ ಯಾರೇ ತಪ್ಪು ಮಾಡಿದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಇನ್ನು ಶಾಸಕ ಸಂಗಮೇಶ್‌ ಪುತ್ರನಿಂದ ಮಹಿಳಾ ಅಧಿಕಾರಿ ಮೇಲೆ ಬೆದರಿಕೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಸವೇಶ್‌ ಪಾತ್ರವಿದ್ದರೆ ಪೊಲೀಸರು ಎಫ್‌ಐಆರ್‌ ದಾಖಲಿಸಲಿದ್ದಾರೆ. ತುರ್ತು ವರದಿ ನೀಡಲು ಡಿವೈಎಸ್ಪಿಗೆ ಸೂಚನೆ ನೀಡಿದ್ದೇನೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

9 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

9 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

9 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

10 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

11 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

17 hours ago