ಬೆಳಗಾವಿ: ಮೈಸೂರು ನಗರದಲ್ಲಿರುವ ಚಾಮರಾಜೇಂದ್ರ ಮೃಗಾಲಯದಲ್ಲಿ 356 ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಕೇವಲ 9 ಮಂದಿ ಮಾತ್ರ ಖಾಯಂ ನೌಕರರಾಗಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ವಿಧಾನಸಭೆಗೆ ತಿಳಿಸಿದರು.
ಇದನ್ನು ಓದಿ: ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ಧ: ಸಚಿವ ಕೃಷ್ಣಭೈರೇಗೌಡ
ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಶ್ರೀವತ್ಸ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮೈಸೂರು ಮೃಗಾಲಯದಲ್ಲಿ 139 ಮಂಜೂರಾದ ಹುದ್ದೆಗಳು ಇದ್ದು, ಈ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆದು ನೇರ ನೇಮಕಾತಿ ಮಾಡಲಾಗುವುದು. ನೇರ ಗುತ್ತಿಗೆಯ 75 ನೌಕರರಿದ್ದು, ನೇಮಕ ಸಂದರ್ಭದಲ್ಲಿ ಅವರಿಗೆ ವಯೋಮಿತಿ ಸಡಿಲಿಕೆ ಅನುಭವದ ಆಧಾರದ ಮೇಲೆ ನೇಮಕಾತಿಯಲ್ಲಿ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಮೃಗಾಲಯದಲ್ಲಿ ನಿಯೋಜಿತ ಅಧಿಕಾರಿಗಳು 9, ಹೊರಗುತ್ತಿಗೆ ನೌಕರರು 164 ಹಾಗೂ 99 ಭದ್ರತಾ ಸಿಬ್ಬಂದಿಗಳಿದ್ದಾರೆ. ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.





