ರಾಜ್ಯ

ಮೈಸೂರು ಮೃಗಾಲಯದಲ್ಲಿ 9 ಮಂದಿ ಮಾತ್ರ ಖಾಯಂ ನೌಕರರಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ಬೆಳಗಾವಿ: ಮೈಸೂರು ನಗರದಲ್ಲಿರುವ ಚಾಮರಾಜೇಂದ್ರ ಮೃಗಾಲಯದಲ್ಲಿ 356 ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಕೇವಲ 9 ಮಂದಿ ಮಾತ್ರ ಖಾಯಂ ನೌಕರರಾಗಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ವಿಧಾನಸಭೆಗೆ ತಿಳಿಸಿದರು.

ಇದನ್ನು ಓದಿ: ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ಧ: ಸಚಿವ ಕೃಷ್ಣಭೈರೇಗೌಡ

ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಶ್ರೀವತ್ಸ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮೈಸೂರು ಮೃಗಾಲಯದಲ್ಲಿ 139 ಮಂಜೂರಾದ ಹುದ್ದೆಗಳು ಇದ್ದು, ಈ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆದು ನೇರ ನೇಮಕಾತಿ ಮಾಡಲಾಗುವುದು. ನೇರ ಗುತ್ತಿಗೆಯ 75 ನೌಕರರಿದ್ದು, ನೇಮಕ ಸಂದರ್ಭದಲ್ಲಿ ಅವರಿಗೆ ವಯೋಮಿತಿ ಸಡಿಲಿಕೆ ಅನುಭವದ ಆಧಾರದ ಮೇಲೆ ನೇಮಕಾತಿಯಲ್ಲಿ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಮೃಗಾಲಯದಲ್ಲಿ ನಿಯೋಜಿತ ಅಧಿಕಾರಿಗಳು 9, ಹೊರಗುತ್ತಿಗೆ ನೌಕರರು 164 ಹಾಗೂ 99 ಭದ್ರತಾ ಸಿಬ್ಬಂದಿಗಳಿದ್ದಾರೆ. ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

6 mins ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

20 mins ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

1 hour ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

2 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

4 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

6 hours ago