ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‍ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ ಸಮಾರಂಭದಲ್ಲಿ ಹೋಟೆಲ್ ಉದ್ಘಾಟಿಸಿದ ಬಳಿಕ, ಸಿಎಂ ಸಿದ್ದರಾಮಯ್ಯ ಅವರು ಖುದ್ದಾಗಿ ಕುಳಿತು ಪ್ರಸಿದ್ಧ ಬೆಣ್ಣೆ ಖಾಲಿ ದೋಸೆ ಮತ್ತು ಕಾಶಿ ಹಲ್ವಾವನ್ನು ಸವಿದರು. ದೋಸೆಯ ರುಚಿಗೆ ತಲೆದೂಗಿದ ಅವರು, ನಾನು ಮೈಸೂರಿನಲ್ಲಿ ಅನೇಕ ಬಾರಿ ಈ ದೋಸೆ ಸವಿದಿದ್ದೇನೆ. ಈಗ ಬೆಂಗಳೂರಿನಲ್ಲೂ ಅದೇ ಅಪ್ಪಟ ರುಚಿ ಸಿಗುತ್ತಿದೆ. ಆಹಾರ ಪ್ರಿಯರು ಇನ್ನುಮುಂದೆ ಮೈಲಾರಿ ದೋಸೆಗಾಗಿ ಮೈಸೂರಿಗೆ ಹೋಗುವ ಅಗತ್ಯವಿಲ್ಲ, ಅದು ಈಗ ನಮ್ಮ ಇಂದಿರಾನಗರದಲ್ಲೇ ಸಿಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
1938ರಲ್ಲಿ ಗೌರಮ್ಮನವರು ಮೈಸೂರಿನ ನಜರ್‍ಬಾದ್‍ನಲ್ಲಿ ಆರಂಭಿಸಿದ್ದ ಈ ರುಚಿಯ ಪರಂಪರೆಯನ್ನು, ಇದೀಗ ನಾಲ್ಕನೇ ತಲೆಮಾರಿನ ಸಚಿನ್ ಮತ್ತು ಸಿಂಧು ದಂಪತಿ ಬೆಂಗಳೂರಿಗೆ ವಿಸ್ತರಿಸಿದ್ದಾರೆ. ಬಾಳೆ ಎಲೆ ಊಟ ಮತ್ತು ಹಳ್ಳಿ ಸೊಗಡಿನ ದೇಸಿ ರುಚಿಯನ್ನು ಉಳಿಸಿಕೊಂಡು ಹೋಗುವುದು ತಮ್ಮ ಗುರಿ ಎಂದು ಹೋಟೆಲ್ ಮಾಲೀಕರು ತಿಳಿಸಿದರು. ಡಾ.ರಾಜ್‍ಕುಮಾರ್‍ರಿಂದ ಹಿಡಿದು ಸಚಿನ್ ತೆಂಡೂಲ್ಕರ್‍ವರೆಗೆ ಮತ್ತು ಬಿಬಿಸಿ ಪಟ್ಟಿಯಲ್ಲೂ ಸ್ಥಾನ ಪಡೆದಿದ್ದ ಈ ಹೋಟೆಲ್ ಇಂದಿನಿಂದ ಅಧಿಕೃತವಾಗಿ ಬೆಂಗಳೂರಿಗರ ಸೇವೆಗೆ ಲಭ್ಯವಾಗಿದೆ.
ಕಾರ್ಯಕ್ರಮದಲ್ಲಿ ಶಾಸಕರಾದ ರಿಜ್ವಾನ್ ಅರ್ಷದ್, ಜಿ.ಟಿ.ದೇವೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವರು ಉಪಸ್ಥಿತರಿದ್ದರು.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…