ರಾಜ್ಯ

ಮೈಸೂರಿನ ಒರಿಜಿನಲ್‌ ಮೈಲಾರಿ ಹೋಟೆಲ್‌ ಇದೀಗ ಬೆಂಗಳೂರಲ್ಲೂ ಲಭ್ಯ

ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‍ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ ಸಮಾರಂಭದಲ್ಲಿ ಹೋಟೆಲ್ ಉದ್ಘಾಟಿಸಿದ ಬಳಿಕ, ಸಿಎಂ ಸಿದ್ದರಾಮಯ್ಯ ಅವರು ಖುದ್ದಾಗಿ ಕುಳಿತು ಪ್ರಸಿದ್ಧ ಬೆಣ್ಣೆ ಖಾಲಿ ದೋಸೆ ಮತ್ತು ಕಾಶಿ ಹಲ್ವಾವನ್ನು ಸವಿದರು. ದೋಸೆಯ ರುಚಿಗೆ ತಲೆದೂಗಿದ ಅವರು, ನಾನು ಮೈಸೂರಿನಲ್ಲಿ ಅನೇಕ ಬಾರಿ ಈ ದೋಸೆ ಸವಿದಿದ್ದೇನೆ. ಈಗ ಬೆಂಗಳೂರಿನಲ್ಲೂ ಅದೇ ಅಪ್ಪಟ ರುಚಿ ಸಿಗುತ್ತಿದೆ. ಆಹಾರ ಪ್ರಿಯರು ಇನ್ನುಮುಂದೆ ಮೈಲಾರಿ ದೋಸೆಗಾಗಿ ಮೈಸೂರಿಗೆ ಹೋಗುವ ಅಗತ್ಯವಿಲ್ಲ, ಅದು ಈಗ ನಮ್ಮ ಇಂದಿರಾನಗರದಲ್ಲೇ ಸಿಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

1938ರಲ್ಲಿ ಗೌರಮ್ಮನವರು ಮೈಸೂರಿನ ನಜರ್‍ಬಾದ್‍ನಲ್ಲಿ ಆರಂಭಿಸಿದ್ದ ಈ ರುಚಿಯ ಪರಂಪರೆಯನ್ನು, ಇದೀಗ ನಾಲ್ಕನೇ ತಲೆಮಾರಿನ ಸಚಿನ್ ಮತ್ತು ಸಿಂಧು ದಂಪತಿ ಬೆಂಗಳೂರಿಗೆ ವಿಸ್ತರಿಸಿದ್ದಾರೆ. ಬಾಳೆ ಎಲೆ ಊಟ ಮತ್ತು ಹಳ್ಳಿ ಸೊಗಡಿನ ದೇಸಿ ರುಚಿಯನ್ನು ಉಳಿಸಿಕೊಂಡು ಹೋಗುವುದು ತಮ್ಮ ಗುರಿ ಎಂದು ಹೋಟೆಲ್ ಮಾಲೀಕರು ತಿಳಿಸಿದರು. ಡಾ.ರಾಜ್‍ಕುಮಾರ್‍ರಿಂದ ಹಿಡಿದು ಸಚಿನ್ ತೆಂಡೂಲ್ಕರ್‍ವರೆಗೆ ಮತ್ತು ಬಿಬಿಸಿ ಪಟ್ಟಿಯಲ್ಲೂ ಸ್ಥಾನ ಪಡೆದಿದ್ದ ಈ ಹೋಟೆಲ್ ಇಂದಿನಿಂದ ಅಧಿಕೃತವಾಗಿ ಬೆಂಗಳೂರಿಗರ ಸೇವೆಗೆ ಲಭ್ಯವಾಗಿದೆ.

ಕಾರ್ಯಕ್ರಮದಲ್ಲಿ ಶಾಸಕರಾದ ರಿಜ್ವಾನ್ ಅರ್ಷದ್, ಜಿ.ಟಿ.ದೇವೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

9 mins ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

10 mins ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

12 mins ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

14 mins ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

16 mins ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

22 mins ago