ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.
ಮೋಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಕಳೆದ ಆರು ತಿಂಗಳಿನಲ್ಲಿ ಸುಮಾರು ಐದನೇ ಬಾರಿಗೆ ಇಂತಹ ಸ್ಫೋಟದ ಘಟನೆ ಜರುಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಹುಮನಾಬಾದ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸೋಕೋ ತಂಡವೂ ಕೂಡ ಆಗಮಿಸಿದ ಸ್ಫೋಟದ ವಸ್ತುಗಳ ಮಾದರಿ ಸಂಗ್ರಹಿಸಲಿದೆ.





