ಮಂಡ್ಯ: ಮೈಶುಗರ್ ಕಾರ್ಖಾನೆಯ ಬಾಯ್ಲರ್ ಗಳ ಕಾರ್ಯನಿರ್ವಹಣೆಗಾಗಿ ಬಾಯ್ಲರ್ ಗಳಿಗೆ ಪೂಜೆ ಸಲ್ಲಿಸಿ ಅಗ್ನಿ ಸ್ಪರ್ಶ ನೀಡಿ ಬಾಯ್ಲರ್ ಗಳ ಕಾರ್ಯ ನಿರ್ವಹಣೆಗೆ ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಹಾಗೂ ರೇಷ್ಮೆ,ಯುವಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ ಸಿ. ನಾರಯಣ ಗೌಡ ಅವರುಗಳು ಚಾಲನೆ ನೀಡಿದರು.
ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಮಾತನಾಡಿ ಮಂಡ್ಯ ಜಿಲ್ಲೆಯ ಮೈಷುಗರ್ ಕಾರ್ಖಾನೆ ಪ್ರಾರಂಭವಾಗಬೇಕು ಎಂಬುವಂತಹ ಆಶಯ ರೈತರಿಗಿತ್ತು. ಮುಖ್ಯ ಮಂತ್ರಿಗಳು ರೈತರಿಗೆ ಮೈಷುಗರ್ ಕಾರ್ಖಾನೆಯನ್ನು ಉಳಿಸಲು ಸ್ಪಂದಿಸಿದ್ದಾರೆ ಎಂದರು.
ಇಂದು ಮೈಷುಗರ್ ಕಾರ್ಖಾನೆಗೆ ಪೂಜೆ ಸಲ್ಲಿಸಿ ಬಾಯ್ಲರ್ ಗೆ ಅಗ್ನಿ ಸ್ಪರ್ಶವನ್ನು ಮಾಡಲಾಗಿದೆ.ಮುಂದಿನ ದಿನಗಳಲ್ಲಿ ಮಾನ್ಯ ಮುಖ್ಯಮಂತ್ರಿಗಳು ಮೈಶುಗರ್ ಕಾರ್ಖಾನೆಯನ್ನು ಉದ್ಘಾಟಿಸಲಿದ್ದಾರೆ.ಅವರಿಗೆ ಜಿಲ್ಲೆಯ ರೈತರ ಪರವಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇವೆ ಎಂದರು.
ಜಿಲ್ಲೆಯ ಜನತೆಗಾಗಿ ಸರ್ಕಾರವು ಒಳ್ಳೆಯ ಕೆಲಸವನ್ನು ಮಾಡುತ್ತಿದೆ ಮುಂದಿನ ದಿನಗಳಲ್ಲೂ ಸಹ ಮೈ ಶುಗರ್ ಕಾರ್ಖಾನೆಯನ್ನು ಉಳಿಸಿ ಬೆಳೆಸುವಂತಹ ಕಾರ್ಯವನ್ನು ಮಾಡೋಣ ಎಂದು ಹೇಳಿದರು.
ಮೈ ಶುಗರ್ ಕಾರ್ಖಾನೆ ಆರಂಭಿಸಲು ಬೇಕಾದಂತಹ ಕಬ್ಬನ್ನು ರೈತರಿಂದ ಈಗಾಗಲೇ ಪಡೆದುಕೊಳ್ಳಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರೈತರು ಸಕ್ಕರೆ ಕಾರ್ಖಾನೆಯನ್ನು ಸರ್ಕಾರ ಪ್ರಾರಂಭಿಸುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಷ್, ಶಾಸಕ ಎಂ.ಶ್ರೀನಿವಾಸ್, ಜಿಲ್ಲಾಧಿಕಾರಿ ಎಸ್ ಅಶ್ವತಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಹುಲ್ಮನಿ,ಮೈ ಶುಗರ್ ಪ್ರಧಾನ ವ್ಯವಸ್ಥಾಪಕ ಶಿವಾನಂದಮೂರ್ತಿ ಮತ್ತು ಮೈ ಶುಗರ್ ವ್ಯವಸ್ಥಾಪಕ ನಿರ್ದೇಶಕ ಪಾಟೀಲ ಅಪ್ಪ ಸಹೇಬ ಉಪಸ್ಥಿತರಿದ್ದರು