ರಾಜ್ಯ

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ.

ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ಧೇಶ್ವರ ಸ್ವಾಮೀಜಿ ಅವರು ಆಹ್ವಾನ ತಿರಸ್ಕರಿಸಿದ್ದಾರೆ ಎಂಬ ವದಂತಿ ಹರಿದಾಡಿತ್ತು. ಆದರೆ ಇದೀಗ ಈ ವದಂತಿಗೆ ತೆರೆ ಬಿದ್ದಿದೆ. ಗವಿಸಿದ್ಧೇಶ್ವರ ಸ್ವಾಮೀಜಿ ಅವರು ದಸರಾ ಉದ್ಘಾಟನೆಯ ಆಹ್ವಾನವನ್ನು ಅತ್ಯಂತ ಸಂತೋಷದಿಂದ ಸ್ವೀಕರಿಸಿದ್ದಾರೆ ಎಂದು ಸ್ಪಷ್ಟಪಡಿಸಲಾಗಿದೆ.

ಕಳೆದ ಒಂದು ವಾರದಿಂದ ಸ್ವಾಮೀಜಿ ಅವರು ಮೌನ ವ್ರತದಲ್ಲಿದ್ದರು. ಶನಿವಾರ ಮಧ್ಯಾಹ್ನ ಅವರು ತಮ್ಮ ಮೌನ ವ್ರತವನ್ನು ಅಂತ್ಯಗೊಳಿಸಿದ್ದಾರೆ.

ಗವಿಶ್ರೀ ಅವರು ದಸರಾ ಉತ್ಸವ ಉದ್ಘಾಟಿಸುವುದು ಹೆಮ್ಮೆಯ ವಿಷಯ ಎಂದು ಮಠ ತಿಳಿಸಿದೆ.

ಇನ್ನು ದಸರಾ ಉದ್ಘಾಟನೆಗೆ ನೀಡಿರುವ ಆಹ್ವಾನವನ್ನು ತಿರಸ್ಕರಿಸಿರುವ ಕುರಿತು ಗವಿಮಠವಾಗಲಿ ಅಥವಾ ಗವಿಶ್ರೀಯವರಾಗಲಿ ಈವರೆಗೆ ಯಾವುದೇ ಅಧಿಕೃತ ಹೇಳಿಕೆ ಅಥವಾ ಪ್ರಕಟಣೆ ನೀಡಿಲ್ಲ ಎಂದು ಮಠ ಸ್ಪಷ್ಟಪಡಿಸಿದೆ.

ಹೀಗಾಗಿ, ಗವಿಸಿದ್ಧೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆ ಎಂಬ ಸುದ್ದಿ ಕೇವಲ ವದಂತಿ ಎಂದು ಸ್ಪಷ್ಟವಾಗಿದೆ.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

11 mins ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

2 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

6 hours ago

ಪೋಕ್ಸೋ ಕಾಯಿದೆ ದುರ್ಬಳಕೆ, ಚಿತಾವಣೆ ಪೋಕ್ಸೋ ಅಪರಾಧಕ್ಕೆ ಸಮ!

ಸ್ಟ್ಯಾನ್ಲಿ, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಮಕ್ಕಳಿಗೆ ನೈತಿಕ ಪಾಠ ಮಾಡಬೇಕಾದ ಶಿಕ್ಷಕರು ಸೇರಿಕೊಂಡು ಮಕ್ಕಳಿಗೆ ಪ್ರಚೋದನೆ ನೀಡಿ ತಮ್ಮ…

6 hours ago

ರಾಜಕೀಯ ಧ್ರುವೀಕರಣಕ್ಕೆ ಈಗ ಸಿಗುತ್ತಿದೆ ವೇಗ

ರಾಜ್ಯ ರಾಜಕಾರಣ ಕುತೂಹಲಕಾರಿ ತಿರುವು ಪಡೆಯುತ್ತಿದೆ. ನಾಲ್ಕು ತಿಂಗಳ ಹಿಂದೆ ಸಿದ್ದರಾಮಯ್ಯ ಸಿಎಂ ಹುದ್ದೆಯಿಂದ ಕೆಳಗಿಳಿದಿದ್ದೇ ಇದಕ್ಕೆ ಕಾರಣ. ಅಂದ…

6 hours ago

ಮಳೆಯಿಲ್ಲದೇ ಒಣಗುತ್ತಿದೆ ನಾಟಿ ಮಾಡಿದ ಪೈರು

ಲಕ್ಷ್ಮೀಕಾಂತ್ ಕೊಮಾರಪ್ಪ ವಾಡಿಕೆಯಂತೆ ಸುರಿಯದ ಮಳೆ; ಆತಂಕಗೊಂಡಿರುವ ರೈತರು ಸೋಮವಾರಪೇಟೆ: ಮಳೆ ಕೈಕೊಟ್ಟ ಪರಿಣಾಮ ಭತ್ತದ ಬೆಳೆಗೆ ನೀರಿನ ಕೊರತೆ…

6 hours ago