Categories: ರಾಜ್ಯ

ದಿಲ್ಲಿ ರೈತರ ಹೋರಾಟ ಬೆಂಬಲಿಸಿ ಮೌನ ಧರಣಿ: ಕುರಬೂರು ಶಾಂತಕುಮಾರ್‌

ಬೆಂಗಳೂರು: ದೇಶದ ರೈತರ ಬಗ್ಗೆ ನಿರ್ಲಕ್ಷ್ಯ ಭಾವನೆ ತೋರುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ನವೆಂಬರ್‌ 26 ರಂದು ರಾಷ್ಟ್ರೀಯ ರೈತ ಮುಖಂಡ ಜಗಜಿತ್‌ ಸಿಂಗ್‌ ಧಲೆವಾಲಾ ನೇತೃತ್ವದಲ್ಲಿ ನಡೆಯುವ ರೈತರ ಹೋರಾಟ ಬೆಂಬಲಿಸಿ ಮೌನ ಧರಣಿ ಮಾಡಲಾಗುವುದು ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ದಕ್ಷಿಣ ಭಾರತ ಸಂಚಾಲಕ ಕುರಬೂರು ಶಾಂತಕುಮಾರ್‌ ತಿಳಿಸಿದ್ದಾರೆ.

ನಗರದಲ್ಲಿ ಇಂದು (ನ.20) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿ ರೈತರ ಉಪವಾಸ ಸತ್ಯಾಗ್ರಹ ಬೆಂಬಲಿಸಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರೈತ ಸಂಘಟನೆಗಳು ನವೆಂಬರ್‌ 26 ರಂದು ಮೌನ ಧರಣಿ ನಡೆಸಲಾಗುತ್ತಿದೆ. ಅಲ್ಲದೇ ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಸಂಜೀವ್‌ ಖನ್ನಾ ಅವರಿಗೂ ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಇನ್ನು ದೆಹಲಿಯಲ್ಲಿ ಮೌನ ಧರಣಿ ನಡೆಸುವ ವೇಳೆ ದೆಹಲಿ ರೈತ ಮುಖಂಡರ ಪ್ರಾಣಕ್ಕೆ ಅಪಾಯ ಆದರೆ ಕೇಂದ್ರ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ. ಅಲ್ಲದೇ ಕೇಂದ್ರ ಇದರಿಂದ ಎಚ್ಚೆತ್ತುಕೊಳ್ಳದೆ ಹೋದರೆ ರಾಜ್ಯದಲ್ಲಿಯೂ ದೆಹಲಿ ಹೋರಾಟ ಬೆಂಬಲಿಸಿ ಸಹಸ್ರಾರು ಸಂಖ್ಯೆಯ ರೈತರ ವಿರುದ್ಧ ಉಪವಾಸ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇದೇ ಸಂದರ್ಭದಲ್ಲಿ ರಾಜ್ಯದ ಉತ್ತರ ಕರ್ನಾಟಕ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ ಹಾಗೂ ಗುಲ್ಬರ್ಗ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಕಬ್ಬಿಗೆ ಎಫ್‌ಆರ್‌ಪಿ ಮೇಲೆ ಹೆಚ್ಚುವರಿ ದರ ನಿಗಧಿ ಮಾಡಬೇಕೆಂದು ರೈತರು ಹೋರಾಟ ನಡೆಸುತ್ತಿದ್ದಾರೆ. ಬೆಳಗಾವಿ ಅಧಿವೇಶನ ಶುರುವಾಗುವ ಮುನ್ನವೇ ಸಿಎಂ ಸಿದ್ದರಾಮಯ್ಯ ಅವರು ರೈತ ಮುಖಂಡರ ಸಭೆ ಕರೆದು ರಾಜ್ಯಾದ್ಯಾಂತ ಕಬ್ಬು ಬೆಳೆಗಾರರ ಸಮಸ್ಯೆ ಬಗೆ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದಲ್ಲಿ ಮೂರು ದಿನ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…

1 hour ago

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

4 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

4 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

5 hours ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

5 hours ago