ಬೆಂಗಳೂರು: ದೇಶದ ರೈತರ ಬಗ್ಗೆ ನಿರ್ಲಕ್ಷ್ಯ ಭಾವನೆ ತೋರುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ನವೆಂಬರ್ 26 ರಂದು ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ಧಲೆವಾಲಾ ನೇತೃತ್ವದಲ್ಲಿ ನಡೆಯುವ ರೈತರ ಹೋರಾಟ ಬೆಂಬಲಿಸಿ ಮೌನ ಧರಣಿ ಮಾಡಲಾಗುವುದು ಎಂದು ಸಂಯುಕ್ತ ಕಿಸಾನ್ ಮೋರ್ಚಾ ದಕ್ಷಿಣ ಭಾರತ ಸಂಚಾಲಕ ಕುರಬೂರು ಶಾಂತಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಇಂದು (ನ.20) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿ ರೈತರ ಉಪವಾಸ ಸತ್ಯಾಗ್ರಹ ಬೆಂಬಲಿಸಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರೈತ ಸಂಘಟನೆಗಳು ನವೆಂಬರ್ 26 ರಂದು ಮೌನ ಧರಣಿ ನಡೆಸಲಾಗುತ್ತಿದೆ. ಅಲ್ಲದೇ ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಸಂಜೀವ್ ಖನ್ನಾ ಅವರಿಗೂ ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.
ಇನ್ನು ದೆಹಲಿಯಲ್ಲಿ ಮೌನ ಧರಣಿ ನಡೆಸುವ ವೇಳೆ ದೆಹಲಿ ರೈತ ಮುಖಂಡರ ಪ್ರಾಣಕ್ಕೆ ಅಪಾಯ ಆದರೆ ಕೇಂದ್ರ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ. ಅಲ್ಲದೇ ಕೇಂದ್ರ ಇದರಿಂದ ಎಚ್ಚೆತ್ತುಕೊಳ್ಳದೆ ಹೋದರೆ ರಾಜ್ಯದಲ್ಲಿಯೂ ದೆಹಲಿ ಹೋರಾಟ ಬೆಂಬಲಿಸಿ ಸಹಸ್ರಾರು ಸಂಖ್ಯೆಯ ರೈತರ ವಿರುದ್ಧ ಉಪವಾಸ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯದ ಉತ್ತರ ಕರ್ನಾಟಕ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ ಹಾಗೂ ಗುಲ್ಬರ್ಗ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಕಬ್ಬಿಗೆ ಎಫ್‌ಆರ್‌ಪಿ ಮೇಲೆ ಹೆಚ್ಚುವರಿ ದರ ನಿಗಧಿ ಮಾಡಬೇಕೆಂದು ರೈತರು ಹೋರಾಟ ನಡೆಸುತ್ತಿದ್ದಾರೆ. ಬೆಳಗಾವಿ ಅಧಿವೇಶನ ಶುರುವಾಗುವ ಮುನ್ನವೇ ಸಿಎಂ ಸಿದ್ದರಾಮಯ್ಯ ಅವರು ರೈತ ಮುಖಂಡರ ಸಭೆ ಕರೆದು ರಾಜ್ಯಾದ್ಯಾಂತ ಕಬ್ಬು ಬೆಳೆಗಾರರ ಸಮಸ್ಯೆ ಬಗೆ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…