Mysore
31
clear sky

Social Media

ಶುಕ್ರವಾರ, 07 ಫೆಬ್ರವರಿ 2025
Light
Dark

ಮುಡಾ ಹಗರಣ| ಇ.ಡಿ.ನೋಟಿಸ್‌ ರಾಜಕೀಯ ಪ್ರೇರಿತ: ಚಲುವರಾಯಸ್ವಾಮಿ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್‌ ಅವರಿಗೂ ಜಾರಿ ನಿರ್ದೇಶನಾಲಯ(ಇ.ಡಿ.) ನೋಟಿಸ್‌ ನೀಡಿರುವುದು ರಾಜಕೀಯ ಪ್ರೇರಿತವಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.28) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾದಲ್ಲಿ 50:50 ಅನುಪಾತದಲ್ಲಿ ಬದಲಿಯಾಗಿ ನಿವೇಶನ ಹಂಚಿಕೆಯಾಗಿದೆ. ಈ ನಿವೇಶನ ಹಂಚಿಕೆಯಾಗಿರುವುದು ಬಿಜೆಪಿ ಅವಧಿಯಲದಲ್ಲೇ,ತನಿಖೆ ಆದರೆ ಬಿಜೆಪಿ ಅವಧಿಯೊಂದಲೇ ತನಿಖೆಯಾಗಬೇಕು. ಹಾಗಾಗಿ ನಮಗೆ ಯಾವುದೇ ಆತಂಕವಿಲ್ಲ ಎಂದರು.

ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ಮುಡಾ ಕಚೇರಿಗೆ ತಮ್ಮ ನಿವೇಶನಗಳನ್ನು ಹಿಂತಿರುಗಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ಅವರ ನೇತೃತ್ವದಲ್ಲೇ ರಾಜ್ಯ ಸರ್ಕಾರ ಆಡಳಿತ ನಡೆಸುತ್ತಿದೆ. ಹೀಗಾಗಿ ಇದನ್ನು ಬಿಜೆಪಿಗೆ ಸಹಿಸಲು ಆಗುತ್ತಿಲ್ಲ ಎಂದು ಆರೋಪಿಸಿದರು.

ನಮ್ಮ ಪಕ್ಷ ಸತತ ಮೂರು ಮರು ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದು, 2028ರ ವಿಧಾನಸಭಾ ಚುನಾವಣೆಯಲ್ಲಿಯೂ ಸಹ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ. ಹೈಕಮಾಂಡ್‌ ತೀರ್ಮಾನವೇ ನಮ್ಮ ಪಕ್ಷದ ಅಂತಿಮ ತೀರ್ಮಾನವಾಗಿದೆ. ಹೀಗಾಗಿ ಸಿಎಂ ಮತ್ತು ಡಿಸಿಎಂ ವಿಚಾರದಲ್ಲಿಯೂ ಹೈಕಮಾಂಡ್‌ನ ನಿರ್ಧಾರವೇ ಅಂತಿಮವಾಗಿದೆ. ಆದರೆ ಬಿಜೆಪಿಯಲ್ಲಿರುವಷ್ಟು ಗೊಂದಲ ನಮ್ಮಲ್ಲಿ ಇಲ್ಲ ಎಂದು ಹೇಳಿದರು.

Tags: