ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಆಚರಿಸುವ ಸಂಬಂಧ ಪೂರ್ವಭಾವಿಯಾಗಿ ಚರ್ಚಿಸಲು ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಕೆ.ವೆಂಕಟೇಶ್, ಶಿವರಾಜ್ ಎಸ್. ತಂಗಡಗಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಶಾಸಕ ಜಿ.ಟಿ.ದೇವೇಗೌಡ, ರಮೇಶ್ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ, ತನ್ವೀರ್ ಸೇಠ್, ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಕುಮಾರ್, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಅಯೂಬ್ ಖಾನ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.





