ರಾಜ್ಯ

ಕಾಂಗ್ರೆಸ್‌ನ ನಿರ್ದಿಷ್ಟ ಸಮುದಾಯದ ಓಲೈಕೆಯೇ ನಾಗಮಂಗಲ ಘಟನೆಗೆ ಕಾರಣ: ಎಚ್.ಡಿ ಕುಮಾರಸ್ವಾಮಿ

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಕುರಿತು ಸಾಮಾಜಿಕ ಜಾಲಾತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಅವರು, ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ ಎಂದು ಕಿಡಿಕಾರಿದ್ದಾರೆ.

ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ. ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರು ಶಾಂತಿ ಕಾಪಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು. ಅಲ್ಲದೆ; ಈ ಪ್ರಕರಣ ನೆಪದಲ್ಲಿ ವಿರೋಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರು ದರ್ಪ ತೋರಿದರೆ ಸಹಿಸುವ ಪ್ರಶ್ನೆ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

2 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸರ್ಕಾರ ಗುಣಮಟ್ಟದ ಚಲನಚಿತ್ರಗಳಿಗೆ ನೀಡುವ ಸಹಾಯಧನದ ಆಚೆ ಈಚೆ

ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…

3 hours ago

ಅಮೃತ್ ೨.೦ ಯೋಜನೆ ಕಾಮಗಾರಿ ಚುರುಕು

ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…

3 hours ago

ಸಫಾರಿಗೆ ರಹದಾರಿ; ವಾದ-ಪ್ರತಿರೋಧ

ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…

3 hours ago

ದಮ್ಮನಕಟ್ಟೆ ಸಫಾರಿ ಸವಿಯಲು ಪ್ರವಾಸಿಗರು ಕಾತರ…

ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…

3 hours ago