ಬೆಂಗಳೂರು: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆ ಸಂಬಂಧಪಟ್ಟಂತೆ ಬಿಜೆಪಿಯಿಂದ ರಚನೆಯಾಗಿದ್ದ ಸತ್ಯ ಶೋಧನಾ ಸಮಿತಿಯು ಗುರುವಾರ ಪಕ್ಷಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ.
ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಮಿತಿಯ ಸದಸ್ಯರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ವರದಿ ಹಸ್ತಾಂತರಿಸಿದೆ. ಸಮಿತಿಯ ಸದಸ್ಯರಾದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ನೇತೃತ್ವದಲ್ಲಿ ಮಾಜಿ ಸಚಿವರಾದ ಭೈರತಿ ಬಸವರಾಜ್, ಕೆ.ಸಿ.ನಾರಾಯಣಗೌಡ, ಬಿಜೆಪಿ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ವರದಿ ತಯಾರಿಸಿದ್ದಾರೆ.
ವರದಿಯಲ್ಲಿ ನಾಗಮಂಗಲ ಗಲಭೆಯು ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಪೊಲೀಸ್ ಮತ್ತು ರಾಜ್ಯ ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣ ಎಂದು ತಿಳಿಸಿದೆ.
ವರದಿಯ ಉಲ್ಲೇಖಿತ ಅಂಶಗಳು ಹೀಗಿವೆ…..
ಬಾಂಗ್ಲಾ ದೇಶದಿಂದ ಬಂದಿರುವ ಕೆಲವು ಕಿಡಿಗೇಡಿಗಳು ಇದರಲ್ಲಿ ಶಾಮೀಲಾಗಿದ್ದಾರೆ.
ದೇಶದ್ರೋಹಿಗಳು ಗಲಭೆ ಎಬ್ಬಿಸಲು ಮುಂಚಿತವಾಗಿಯೇ ಕತ್ತಿ, ತಲ್ವಾರ್, ಪೆಟ್ರೋಲ್ ಬಾಂಬ್, ಮಾಸ್ಕ್ ಗಳನ್ನು ಖರೀದಿ ಮಾಡಿದ್ದಾರೆ.
ಕಳೆದ ವರ್ಷ ಇಲ್ಲಿ ಗಲಭೆ ನಡೆದಿದ್ದರೂ ಗುಪ್ತಚರ ವಿಭಾಗ ಮತ್ತು ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ.
ಗಲಭೆಗೆ ರಾಜ್ಯ ಸರ್ಕಾರದ ವೈಫಲ್ಯವೂ ಪ್ರಮುಖ ಕಾರಣವಾಗಿದೆ.
ಘಟನೆ ಬಗ್ಗೆ ತಿಳಿದಿದ್ದರು ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ನಿಯೋಜಿಸಲಿಲ್ಲ.
ಗಲಭೆಯಲ್ಲಿ ಪೊಲೀಸರಿಗೂ ಗಾಯಗಳಾಗಿವೆ.
ಗಲಭೆ ಕುರಿತು ಎನ್‌ಐಎ ತನಿಖೆ ಆಗಬೇಕು.
ಗಲಭೆಯಿಂದ ಒಟ್ಟು 2.66 ಕೋಟಿ ಮೌಲ್ಯದ ಆಸ್ತಿ ನಾಶ.
ಇದೇ ವರದಿಯನ್ನು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೂ ಸಲ್ಲಿಸಲು ಬಿಜೆಪಿ ಚಿಂತಿಸಿದೆ. ಜೊತೆಗೆ ಘಟನೆಗೆ ಕೇರಳ ಮೂಲದ ಲಿಂಕ್ ಬಗ್ಗೆಯೂ ಉಲ್ಲೇಖಿಸಿ ಎನ್‌ಐಎ ತನಿಖೆ ಬಗ್ಗೆ ಒತ್ತಡ ಹೇರಲಿದೆ ಎಂದು ಮೂಲಗಳು ತಿಳಿಸಿವೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…