Mysore
21
overcast clouds

Social Media

ಸೋಮವಾರ, 07 ಅಕ್ಟೋಬರ್ 2024
Light
Dark

ನಾಗಮಂಗಲ ಕಲ್ಲು ತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಟ್ವೀಟ್‌

ಬೆಂಗಳೂರು: ನಾಗಮಂಗಲದಲ್ಲಿ ಗಣೇಶೋತ್ಸವದ ವೇಲೆ ಘರ್ಷಣೆ ನಡೆದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಘರ್ಷಣೆ ನಡೆಸಿದ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ನಾಗಮಂಗಲದಲ್ಲಿ ನಡೆದ ಘರ್ಷಣೆಯು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ದುಷ್ಕೃತ್ಯವಾಗಿದೆ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದೆ. ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದಿದ್ದಾರೆ.

ಕಳೆದ ಒಂದೂವರೆ ವರ್ಷಗಳಿಂದ ರಾಜ್ಯದಲ್ಲಿ ಯಾವುದೇ ಹಿಂಸಾಚಾರ ನಡೆದಿರಲಿಲ್ಲ. ನಮ್ಮ ನಾಡನ್ನು ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅವರನ್ನು ಸುಮ್ಮನೆ ಬಿಡುವ ಮಾತೇ ಇಲ್ಲ. ಆ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರು ಪ್ರಚೋದನೆಗೆ ಒಳಗಾಗದೇ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕಾರ ನೀಡಬೇಕು ಎಂದು ಮಂಡ್ಯ ಜನತೆಗೆ ಮನವಿ ಮಾಡಿದ್ದಾರೆ.

Tags: