Mysore
20
overcast clouds
Light
Dark

ನಾಗಮಂಗಲದಲ್ಲಿ ವ್ಯವಸ್ಥಿತವಾಗಿ ಪ್ಲಾನ್‌ ಮಾಡಿ ಕಲ್ಲು ತೂರಾಟ ನಡೆಸಲಾಗಿದೆ: ಮಾಜಿ ಸಂಸದ ಪ್ರತಾಪ್‌ ಸಿಂಹ ಆರೋಪ

ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ನಡೆಸಿದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಕಳೆದ ವರ್ಷವೂ ದರ್ಗಾ ಬಳಿ ಗಲಾಟೆ ಆಗಿತ್ತು. ಈ ವರ್ಷವೂ ವ್ಯವಸ್ಥಿತವಾಗಿ ಸಂಚು ರೂಪಿಸಿ ಕಲ್ಲು ತೂರಾಟ ನಡೆಸಿದ್ದಾರೆ. ಗಲಾಟೆ ನಡೆಯುವುದಕ್ಕೂ ಮುಂಚೆ ಕಲ್ಲು, ಪೆಟ್ರೋಲ್‌ ಬಾಂಬ್‌ ಇಟ್ಟುಕೊಂಡಿದ್ದರು ಎಂದು ಗಂಭೀರ ಆರೋಪ ಮಾಡಿದರು.

ಇನ್ನು ಸಿದ್ದರಾಮಯ್ಯ ನಡೆಸುತ್ತಿರುವುದು ತಾಲಿಬಾನ್‌ ಸರ್ಕಾರ. ಕಾಂಗ್ರೆಸ್‌ ಸರ್ಕಾರದಲ್ಲಿ ಹಿಂದುಗಳಿಗೆ ರಕ್ಷಣೆಯಿಲ್ಲ. ಇಲ್ಲಿಯವರೆಗೂ ಹಲವಾರು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ತಲೆಕೆಡಿಸಿಕೊಂಡಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ನಮ್ಮ ರಾಜ್ಯದಲ್ಲಿ ಯೋಗಿ ಆದಿತ್ಯನಾಥ್‌ ರೀತಿಯ ಸರ್ಕಾರ ಬಂದರೆ ಎಲ್ಲವೂ ಸರಿಹೋಗುತ್ತದೆ. ರಾಜ್ಯದ ಪ್ರತಿ ಹಳ್ಳಿ- ಹಳ್ಳಿಗಳಲ್ಲೂ ಗಣೇಶನನ್ನು ಕೂರಿಸಿ ಗಣೇಶೋತ್ಸವ ಮಾಡುತ್ತೇವೆ. ಈ ರೀತಿ ಘಟನೆಗಳಿಂದ ಜನರು ತುಂಬಾ ಭಯಭೀತರಾಗುತ್ತಿದ್ದಾರೆ. ರಾಜ್ಯ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.