ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ನಡೆಸಿದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಕಳೆದ ವರ್ಷವೂ ದರ್ಗಾ ಬಳಿ ಗಲಾಟೆ ಆಗಿತ್ತು. ಈ ವರ್ಷವೂ ವ್ಯವಸ್ಥಿತವಾಗಿ ಸಂಚು ರೂಪಿಸಿ ಕಲ್ಲು ತೂರಾಟ ನಡೆಸಿದ್ದಾರೆ. ಗಲಾಟೆ ನಡೆಯುವುದಕ್ಕೂ ಮುಂಚೆ ಕಲ್ಲು, ಪೆಟ್ರೋಲ್ ಬಾಂಬ್ ಇಟ್ಟುಕೊಂಡಿದ್ದರು ಎಂದು ಗಂಭೀರ ಆರೋಪ ಮಾಡಿದರು.
ಇನ್ನು ಸಿದ್ದರಾಮಯ್ಯ ನಡೆಸುತ್ತಿರುವುದು ತಾಲಿಬಾನ್ ಸರ್ಕಾರ. ಕಾಂಗ್ರೆಸ್ ಸರ್ಕಾರದಲ್ಲಿ ಹಿಂದುಗಳಿಗೆ ರಕ್ಷಣೆಯಿಲ್ಲ. ಇಲ್ಲಿಯವರೆಗೂ ಹಲವಾರು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ತಲೆಕೆಡಿಸಿಕೊಂಡಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ನಮ್ಮ ರಾಜ್ಯದಲ್ಲಿ ಯೋಗಿ ಆದಿತ್ಯನಾಥ್ ರೀತಿಯ ಸರ್ಕಾರ ಬಂದರೆ ಎಲ್ಲವೂ ಸರಿಹೋಗುತ್ತದೆ. ರಾಜ್ಯದ ಪ್ರತಿ ಹಳ್ಳಿ- ಹಳ್ಳಿಗಳಲ್ಲೂ ಗಣೇಶನನ್ನು ಕೂರಿಸಿ ಗಣೇಶೋತ್ಸವ ಮಾಡುತ್ತೇವೆ. ಈ ರೀತಿ ಘಟನೆಗಳಿಂದ ಜನರು ತುಂಬಾ ಭಯಭೀತರಾಗುತ್ತಿದ್ದಾರೆ. ರಾಜ್ಯ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…