ಬೆಂಗಳೂರು: ನಾಗಮಂಗಲದಲ್ಲಿ ಕಲ್ಲು ತೂರಾಟ ನಡೆದಿದ್ದು ಕೇವಲ ಸಣ್ಣ ಘಟನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಲಘು ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಆಕಸ್ಮಿಕವಾಗಿ ಕಲ್ಲು ತೂರಾಟ ನಡೆದಿದೆ. ಇದು ಕೇವಲ ಸಣ್ಣ ಘಟನೆಯಾಗಿದ್ದು, ಕೋಮುಗಲಭೆ ಎಂದು ಹೇಳುವುದು ತಪ್ಪಾಗುತ್ತದೆ ಎಂದು ಲಘು ಹೇಳಿಕೆ ನೀಡಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ನಾಗಮಂಗಲದಲ್ಲಿ ಈ ಘಟನೆ ನಡೆಯಬಾರದಿತ್ತು. ಈ ಘಟನೆ ಸಣ್ಣ ಪ್ರಮಾಣದಲ್ಲಿ ಆಗಿ ಮುಗಿದಿದ್ದು, ಯಾರೂ ಕೂಡ ಗಾಯಗೊಂಡಿಲ್ಲ. ಆಕಸ್ಮಿಕವಾಗಿ ಅಲ್ಲಿ ಹೋಗುವಾಗ ಕಲ್ಲು ಹಾಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಸ್ತಿ ಪ್ರಚಾರ ನೀಡುವುದು ಬೇಡ ಎಂದು ಲಘುವಾಗಿ ಹೇಳಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…