ಬೆಂಗಳೂರು : ನಟ ದರ್ಶನ್ ವಿರುದ್ಧ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ತೆಲುಗು ನಟ ನಾಗಶೌರ್ಯ ದರ್ಶನ್ ಪರವಾಗಿ ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ನಾಗಶೌರ್ಯ, ʻಇಂತಹ ಕಷ್ಟದ ಸಂದರ್ಭದಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ನೀಡಲಿ. ಈ ಘಟನೆ ಬಗ್ಗೆ ಜನರು ನಿರ್ಣಯಕ್ಕೆ ಬರುತ್ತಿರೋದು ನಿಜಕ್ಕೂ ಬೇಸರದ ವಿಷಯವಾಗಿದೆ. ಕನಸಿನಲ್ಲೂ ಕೂಡ ದರ್ಶನ್ ಅಣ್ಣ ಯಾರಿಗೂ ತೊಂದರೆ ಕೊಡೋದಿಲ್ಲ. ಉದಾರತೆ, ಸಹೃದಯ ಸ್ವಭಾವ, ಇತರರಿಗೆ ಸಹಾಯ ಮಾಡುವ ಗುಣ ಅವರಿಗೆ ಇದೆ. ದರ್ಶನ್ ಅಸಹಾಯಕರಿಗೆ ಸಹಾಯ ಮಾಡಿದ್ದಾರೆ ಅಲ್ಲದೆ ಅನೇಕರಿಗೆ ಶಕ್ತಿಯಾಗಿದ್ದಾರೆ. ನನಗೆ ಈ ಸುದ್ದಿಯನ್ನು ಒಪ್ಪಿಕೊಳ್ಳಲಾಗುತ್ತಿಲ್ಲ. ನನಗೆ ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆಯಿದ್ದು, ಆದಷ್ಟು ಬೇಗ ಸತ್ಯ ಹೊರಬೀಳಲಿದೆ ಎಂದು ನಂಬಿರುತೇನೆ ʼ ಎಂದು ಹೇಳಿದ್ದಾರೆ.