ರಾಜ್ಯ

ಕನಸಿನಲ್ಲೂ ಕೂಡ ದರ್ಶನ್ ಅಣ್ಣ ಯಾರಿಗೂ ತೊಂದರೆ ಕೊಡಲ್ಲ : ದರ್ಶನ್ ಪರ ನಿಂತ ನಟ ನಾಗಶೌರ್ಯ

ಬೆಂಗಳೂರು : ನಟ ದರ್ಶನ್ ವಿರುದ್ಧ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ತೆಲುಗು ನಟ ನಾಗಶೌರ್ಯ ದರ್ಶನ್ ಪರವಾಗಿ ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ.

ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ನಾಗಶೌರ್ಯ, ʻಇಂತಹ ಕಷ್ಟದ ಸಂದರ್ಭದಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ನೀಡಲಿ. ಈ ಘಟನೆ ಬಗ್ಗೆ ಜನರು ನಿರ್ಣಯಕ್ಕೆ ಬರುತ್ತಿರೋದು ನಿಜಕ್ಕೂ ಬೇಸರದ ವಿಷಯವಾಗಿದೆ. ಕನಸಿನಲ್ಲೂ ಕೂಡ ದರ್ಶನ್ ಅಣ್ಣ ಯಾರಿಗೂ ತೊಂದರೆ ಕೊಡೋದಿಲ್ಲ. ಉದಾರತೆ, ಸಹೃದಯ ಸ್ವಭಾವ, ಇತರರಿಗೆ ಸಹಾಯ ಮಾಡುವ ಗುಣ ಅವರಿಗೆ ಇದೆ. ದರ್ಶನ್ ಅಸಹಾಯಕರಿಗೆ ಸಹಾಯ ಮಾಡಿದ್ದಾರೆ ಅಲ್ಲದೆ ಅನೇಕರಿಗೆ ಶಕ್ತಿಯಾಗಿದ್ದಾರೆ. ನನಗೆ ಈ ಸುದ್ದಿಯನ್ನು ಒಪ್ಪಿಕೊಳ್ಳಲಾಗುತ್ತಿಲ್ಲ. ನನಗೆ ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆಯಿದ್ದು, ಆದಷ್ಟು ಬೇಗ ಸತ್ಯ ಹೊರಬೀಳಲಿದೆ ಎಂದು ನಂಬಿರುತೇನೆ ʼ ಎಂದು ಹೇಳಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ…

47 seconds ago

ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…

27 mins ago

ಓದುಗರ ಪತ್ರ: ಟೋಲ್ ದರ ಹೆಚ್ಚಳ ಗಾಯದ ಮೇಲೆ ಬರೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…

1 hour ago

ಓದುಗರ ಪತ್ರ: ಐಪಿಎಲ್ ಟಿಕೆಟ್‌ಗೆ ಗೋಗರೆಯುತ್ತಿರುವ ಶಾಸಕರು

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…

1 hour ago

ಓದುಗರ ಪತ್ರ: ಹಿಂದಿ ಭಾಷೆ ಬಗ್ಗೆ ತಾತ್ಸಾರ ಸಲ್ಲದು

ಎಸ್‌ಎಸ್‌ಎಲ್‌ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್…

1 hour ago

ಓದುಗರ ಪತ್ರ: ಶಾಸಕ ದರ್ಶನ್ ಮಾದರಿ ನಡೆ

ಜನರಿಂದ ಚುನಾಯಿತರಾದ ಜನಪ್ರತಿನಿಧಿಗೆ ತನ್ನ ಕ್ಷೇತ್ರಕ್ಕೆ ಮಾಡಬೇಕಾಗಿರುವ ಯೋಜನೆಗಳ ಬಗ್ಗೆ ಸಾಕಷ್ಟು ಒಲವಿರಬೇಕು ಹಾಗೂ ಬದ್ಧತೆ ಇರಬೇಕು ಎನ್ನುವುದಕ್ಕೆ ತಮಗೆ…

1 hour ago