ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಾಂತರ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ನಾಗೇಂದ್ರ ಅವರನ್ನು ಹೆಚ್ಚಿನ ವಿಚಾರಣೆಗೆ ೬ ದಿನಗಳ ಕಾಲ ಇಡಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಮಾಡಿದೆ.
ಹೆಚ್ಚಿನ ವಿಚಾರಣೆ ಜಾಗೂ ಮಹಜರು ಮಾಡಬೇಕಾಗಿರುವ ಕಾರಣ ಇಂದು ಬೆಳಿಗ್ಗೆ ನಾಗೇಂದ್ರ ಅವರನ್ನು ಯಲಹಂಕದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಜು.೧೮ ರವರೆಗೆ ಇಡಿ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದರು. ಬಳಿಕ ನ್ಯಾಯಾಧೀಶರ ಮನೆಯಿಂದ ಇಡಿ ಕಚೇರಿಗೆ ಆರೋಪಿಯನ್ನ ಅಧಿಕಾರಿಗಳು ಕರೆದೊಯ್ದಿದ್ದಾರೆ.
ನೂರಾರು ಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ ಕಾಂಗ್ರೆಸ್ ಶಾಸಕ ನಾಗೇಂದ್ರರನ್ನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಬಂಧಿಸಿದರು. ಬಳಿಕ ರಾಥ್ರಿ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.