ರಾಜ್ಯ

ವಾಲ್ಮೀಕಿ ಹಗರಣ : ಮಾಜಿ ಸಚಿವ ನಾಗೇಂದ್ರ ೬ ದಿನ ಇ.ಡಿ ಕಸ್ಟಡಿಗೆ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಾಂತರ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ನಾಗೇಂದ್ರ ಅವರನ್ನು ಹೆಚ್ಚಿನ ವಿಚಾರಣೆಗೆ ೬ ದಿನಗಳ ಕಾಲ ಇಡಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಮಾಡಿದೆ.

ಹೆಚ್ಚಿನ ವಿಚಾರಣೆ ಜಾಗೂ ಮಹಜರು ಮಾಡಬೇಕಾಗಿರುವ ಕಾರಣ ಇಂದು ಬೆಳಿಗ್ಗೆ ನಾಗೇಂದ್ರ ಅವರನ್ನು ಯಲಹಂಕದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಜು.೧೮ ರವರೆಗೆ ಇಡಿ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದರು. ಬಳಿಕ ನ್ಯಾಯಾಧೀಶರ ಮನೆಯಿಂದ ಇಡಿ ಕಚೇರಿಗೆ ಆರೋಪಿಯನ್ನ ಅಧಿಕಾರಿಗಳು ಕರೆದೊಯ್ದಿದ್ದಾರೆ.

ನೂರಾರು ಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ ಕಾಂಗ್ರೆಸ್‌ ಶಾಸಕ ನಾಗೇಂದ್ರರನ್ನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಬಂಧಿಸಿದರು. ಬಳಿಕ ರಾಥ್ರಿ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

10 mins ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

29 mins ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

2 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

3 hours ago

ಓದುಗರ ಪತ್ರ: ಇದೇನು ಪಾದಚಾರಿ ರಸ್ತೆಯೋ ಅಥವಾ…?

ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…

3 hours ago

ಓದುಗರ ಪತ್ರ: ನಕಲಿ ಔಷಧಿಗಳ ಜಾಲದ ತಡೆಗೆ ಕಠಿಣ ಕ್ರಮ ಕೈಗೊಳ್ಳಿ

ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…

3 hours ago