ಮಂಗಳೂರು : ಮುಖುಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಶನಿವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಸಂಬಂಧ ಚಿಎಂ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು.
ಈ ಸಂಸರ್ಭದಲ್ಲಿ ಸಚಿವ ಎಸ್.ಅಂಗಾರ, ಸಂಸದ ಡಿ.ವಿ.ಸದಾನಂದ ಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಜೊತೆಯಲ್ಲಿದ್ದರು.
ಕೆಲವು ದಿನಗಳ ಹಿಂದಷ್ಟೇ ಸಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಪಾಲ್ಗೊಳ್ಳಲು ಶನಿವಾರ ಮಂಗಳೂರಿಗೆ ಬಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆಸ್ಪತ್ರೆಗೆ ತೆರಳಿ ನಳಿನ್ ಕುಮಾರ್ ಕಟೀಲ್ ಅವರ ಆರೋಗ್ಯ ವಿಚಾರಿಸಿದರು.