ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಶನಿವಾರ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಈ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಕಾಂಗ್ರೆಸ್ ಮುಖಂಡ ಮೊಹಮ್ಮದ ನಲ ನಲಪಾಡ್ ಮೋದಿ ಚೊಂಬು ತೋರಿಸಲು ಯತ್ನಿಸಿದ್ದಾರೆ.
ಸದ್ಯ ನಲಪಾಡ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳಲು ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಬೆಂಗಳೂರಿನ ಮೇಖ್ರಿ ಸರ್ಕಲ್ ಬಳಿಯ ಎಚ್‌ಕ್ಯೂಟಿಸಿ ಯಿಂದ ತೆರಳುತ್ತಿದ್ದ ವೇಳೆ ರಸ್ತೆಗೆ ನುಗ್ಗಿದ ನಲಪಾಡ್, ಮೋದಿಗೆ ಚೊಂಬು ಪ್ರದರ್ಶಿಸಿದ್ದಾರೆ. ಕೂಡಲೇ ನಲಪಾಡ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಲಪಾಡ್ ಅವರನ್ನು ವಶಕ್ಕೆ ಪಡೆದ ಪೊಲೀಸರು ಅದೇ ದಿನ ರಾತ್ರಿ ಅವರನ್ನು ಜೈಲಿನಿಂದ ಬಡುಗಡೆ ಮಾಡಿದ್ದಾರೆ.