ಚಿಕ್ಕಮಗಳೂರು : ಬೆಳಗಾವಿ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕು ಎಂದು ಹೇಳಿಕೆ ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮಾಜಿ ಸಚಿವ ಸಿ ಟಿ ರವಿ, ನಿಮ್ಮ ಊರಿನ ಬೀದಿಗು ಟಿಪ್ಪು ಸುಲ್ತಾನ್ ಹೆಸರಿಡಲು ಬಿಡುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೈಸೂರು ಏರ್ಪೋರ್ಟ್ ಗೆ ಟಿಪ್ಪು ಸುಲ್ತಾನ್ ಹೆಸರಿಡುವ ವಿಚಾರ, ಅಬ್ಬಯ್ಯ ಅವರೇ ನಿಮ್ಮ ಮನೆಗೆ ಬೇಕಾದರೆ ಟಿಪ್ಪು ಹೆಸರಿಟ್ಟುಕೊಳ್ಳಿ ಎಂದು ಪ್ರಸಾದ್ ಅಬ್ಬಯ್ಯ ವಿರುದ್ಧ ಬಿಜೆಪಿ ಮಾಜಿ ಶಾಸಕ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.
ನಿಮ್ಮ ಊರಿನ ಬೀದಿಗೂ ಟಿಪ್ಪು ಸುಲ್ತಾನ್ ಹೆಸರಿಡಲು ಬಿಡುವುದಿಲ್ಲ ಎಂದು ಕೈ ಶಾಸಕ ಪ್ರಸಾದ್ ಅಬ್ಬಯ್ಯ ವಿರುದ್ಧ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ಸಿಗರಿಗೆ ಅಷ್ಟು ಅಭಿಮಾನ ಇದ್ದರೆ ನಿಮ್ಮ ಕಚೇರಿಗೆ ಇಟ್ಟುಕೊಳ್ಳಿ ಮೈಸೂರು ಏರ್ಪೋರ್ಟ್ ಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಿ ಮೈಸೂರು ಏರ್ಪೋರ್ಟ್ ಗೆ ಟಿಪ್ಪು ಸುಲ್ತಾನ್ ಹೆಸರಿಡಲು ನಾವು ಬಿಡುವುದಿಲ್ಲ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ಮಾದಿ ಶಾಸಕ ಸಿಟಿ ರವಿ ಹೇಳಿದರು.