ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ.
ನಮ್ಮ ಮೆಟ್ರೋ ದರ ಏರಿಕೆಯಿಂದ ರೋಸಿ ಹೋಗಿರುವ ಪ್ರಯಾಣಿಕರು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಈ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ನಮ್ಮ ಮೆಟ್ರೋ ದರ ಏರಿಕೆಯ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿದ್ದರು.
ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ ಅವರು, ನಮ್ಮ ಮೆಟ್ರೋ ದರ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿದ್ದೇ ರಾಜ್ಯ ಸರ್ಕಾರ ಎಂದು ಆರೋಪ ಮಾಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಪ್ರತಿಯೊಂದು ಇಲಾಖೆಯಲ್ಲಿಯೂ ಬೆಲೆ ಏರಿಕೆ ಸಾಮಾನ್ಯವಾಗಿಬಿಟ್ಟಿದೆ.
ಪ್ರಸ್ತುತ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ದರ ನಿಗದಿ ಸಮಿತಿ ರಚಿಸಲು ಮತ್ತು ಇದರ ಸಂಪೂರ್ಣ ಪ್ರಕ್ರಿಯೆಯನ್ನು ಪ್ರಾರಂಭಿಸಲು ಬಿಎಂಆರ್‌ಸಿಎಲ್‌ಗೆ ರಾಜ್ಯ ಸರ್ಕಾರ ಸಲಹೆ ನೀಡಿದ್ದು, ಸಮಿತಿಯಲ್ಲಿನ ರಾಜ್ಯ ಪ್ರತಿನಿಧಿಗಳ ಪ್ರಯಾಣದ ದರ ಏರಿಕೆಯ ಒತ್ತಾಯದ ಮೇರೆಗೆ ಪರಿಷ್ಕೃತ ದರದ ವರದಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಬೆಂಗಳೂರು : ಅಟ್ಲಾಂಟಿಕ್ ಮಹಾಸಾಗರವನ್ನು ಸತತ ೫೨ ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡಿ ದಾಟಿ ದಾಖಲೆಗೈದ ಅನನ್ಯ ಪ್ರಸಾದ್…
ಮೈಸೂರು : ಮಾಜಿ ಸಚಿವ ಸಾ.ರಾ.ಮಹೇಶ್ ಅವರ ಎರಡನೇ ಪುತ್ರ ಸಾ.ರಾ.ಜಯಂತ್ ಮತ್ತು ಎಂ.ಎಸ್.ವರ್ಷಾ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ…
ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು…
ಕಾಂಗ್ರೆಸ್ ಸರ್ಕಾರ ಎಂದಿಗೂ ಮಹಿಳೆಯರ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ ಬೆಂಗಳೂರು:…
ಮಂಡ್ಯ : ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಬೂತ್ ಮಟ್ಟದ ಏಜೆಂಟ್ ಗಳು ಬದಲಾಗಿದ್ದಲ್ಲಿ, ಅವರ ವಿವರದೊಂದಿಗೆ ಬೂತ್ ಲೆವಲ್…