Mysore
24
overcast clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಕೇಂದ್ರ ಸೂಚನೆ ಮೇರೆಗೆ ದರ ಏರಿಕೆ ಕೈಬಿಟ್ಟ ನಮ್ಮ ಮೆಟ್ರೋ

ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್‌ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್‌ಸಿಎಲ್ ಮುಂದಾಗಿತ್ತು. ಆದರೆ ಈ ಕುರಿತು ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ದರ ಪರಿಷ್ಕರಣೆ ತೀರ್ಮಾನವನ್ನು ಕೈಬಿಟ್ಟಿದೆ.

ಮೆಟ್ರೋ ದರ ಏರಿಕೆ ವಿಚಾರವಾಗಿ ಕೇಂದ್ರದಿಂದ ಬಿಎಂಆರ್‌ಸಿಎಲ್ ಎಂ.ಡಿಗೆ ಮೇಲ್ ಮೂಲಕ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮೆಟ್ರೋ ದರ ಏರಿಕೆಗೆ ಬ್ರೇಕ್ ಬಿದ್ದಿದೆ ಎಂದು ಬಿಎಂಆರ್‌ಸಿಎಲ್ ಎಂ.ಡಿ. ರವಿ ಶಂಕರ್ ಸ್ಪಷ್ಟನೆ ನೀಡಿದ್ದಾರೆ.

ತಾತ್ಕಾಲಿಕ ಸ್ಥಗಿತ ಎಂದ ನಮ್ಮ ಮೆಟ್ರೋ
ದರ ಏರಿಕೆ ಕೈ ಬಿಟ್ಟ ವಿಚಾರವಾಗಿ ಬಿಎಂಆರ್‌ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಫೆ.5 ರಂದು ಬಿಎಂಆರ್‌ಸಿಎಲ್ ನೀಡಿದ್ದ ಮಾಧ್ಯಮ ಪ್ರಕಟಣೆಯಲ್ಲಿ ಫೆ.9ರಿಂದ ವಾರ್ಷಿಕ ಸ್ವಯಂಚಾಲಿತ ದರ ಜಾರಿಗೆ ಬರಲಿದೆ ಎಂದು ತಿಳಿಸಲಾಗಿತ್ತು. ಆದರೆ ಈ ನಿರ್ಧಾರವನ್ನು ಮುಂದಿನ ಆದೇಶಗಳ ತನಕ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಪರಿಷ್ಕ ತ ದರ ಕುರಿತು ಅಂತಿಮ ನಿರ್ಧಾರವನ್ನು ನಿರ್ದೇಶಕರ ಮಂಡಳಿಯ ಪರಿಶೀಲನೆಯ ನಂತರ ಪ್ರಕಟಿಸಲಾಗುವುದು. ಬಿಎಂಆರ್‌ಸಿಎಲ್ ಬೆಂಗಳೂರು ನಾಗರಿಕರಿಗೆ ಸುರಕ್ಷಿತ, ನಂಬಿಕಸ್ತ ಮತ್ತು ಕೈಗೆಟುಕುವ ಮೆಟ್ರೋ ಸೇವೆಗಳನ್ನು ಒದಗಿಸಲು ಸದಾ ಬದ್ಧವಾಗಿದೆ ಎಂದು ಬಿಎಂಆರ್‌ಸಿಎಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

 

Tags:
error: Content is protected !!