ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್‌ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್‌ಸಿಎಲ್ ಮುಂದಾಗಿತ್ತು. ಆದರೆ ಈ ಕುರಿತು ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ದರ ಪರಿಷ್ಕರಣೆ ತೀರ್ಮಾನವನ್ನು ಕೈಬಿಟ್ಟಿದೆ.
ಮೆಟ್ರೋ ದರ ಏರಿಕೆ ವಿಚಾರವಾಗಿ ಕೇಂದ್ರದಿಂದ ಬಿಎಂಆರ್‌ಸಿಎಲ್ ಎಂ.ಡಿಗೆ ಮೇಲ್ ಮೂಲಕ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮೆಟ್ರೋ ದರ ಏರಿಕೆಗೆ ಬ್ರೇಕ್ ಬಿದ್ದಿದೆ ಎಂದು ಬಿಎಂಆರ್‌ಸಿಎಲ್ ಎಂ.ಡಿ. ರವಿ ಶಂಕರ್ ಸ್ಪಷ್ಟನೆ ನೀಡಿದ್ದಾರೆ.
ತಾತ್ಕಾಲಿಕ ಸ್ಥಗಿತ ಎಂದ ನಮ್ಮ ಮೆಟ್ರೋ
ದರ ಏರಿಕೆ ಕೈ ಬಿಟ್ಟ ವಿಚಾರವಾಗಿ ಬಿಎಂಆರ್‌ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಫೆ.5 ರಂದು ಬಿಎಂಆರ್‌ಸಿಎಲ್ ನೀಡಿದ್ದ ಮಾಧ್ಯಮ ಪ್ರಕಟಣೆಯಲ್ಲಿ ಫೆ.9ರಿಂದ ವಾರ್ಷಿಕ ಸ್ವಯಂಚಾಲಿತ ದರ ಜಾರಿಗೆ ಬರಲಿದೆ ಎಂದು ತಿಳಿಸಲಾಗಿತ್ತು. ಆದರೆ ಈ ನಿರ್ಧಾರವನ್ನು ಮುಂದಿನ ಆದೇಶಗಳ ತನಕ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಿದೆ.
ಪರಿಷ್ಕ ತ ದರ ಕುರಿತು ಅಂತಿಮ ನಿರ್ಧಾರವನ್ನು ನಿರ್ದೇಶಕರ ಮಂಡಳಿಯ ಪರಿಶೀಲನೆಯ ನಂತರ ಪ್ರಕಟಿಸಲಾಗುವುದು. ಬಿಎಂಆರ್‌ಸಿಎಲ್ ಬೆಂಗಳೂರು ನಾಗರಿಕರಿಗೆ ಸುರಕ್ಷಿತ, ನಂಬಿಕಸ್ತ ಮತ್ತು ಕೈಗೆಟುಕುವ ಮೆಟ್ರೋ ಸೇವೆಗಳನ್ನು ಒದಗಿಸಲು ಸದಾ ಬದ್ಧವಾಗಿದೆ ಎಂದು ಬಿಎಂಆರ್‌ಸಿಎಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…