Mysore
20
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ : ನಮ್ಮ ಮೆಟ್ರೋದಲ್ಲಿ ಸುತ್ತಮುತ್ತ ಸ್ವಚ್ಛತೆ ಕಾಪಾಡಲು ಸೂಚನೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜನರು ಆತಂಕದಲ್ಲೆ ಜೀವನ ನಡೆಸುತ್ತಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಓಡಾಟ ನಡೆಸಲು ಸಹ ಜನರು ಹೆದರಿಕೊಳ್ಳುತ್ತಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿ ಕೂಡ ಅಗತ್ಯ ಕ್ರಮಗಳನ್ನ ಕೈಗೊಳ್ಳುತ್ತಿದೆ.

ಇನ್ನು BMRCL ಕೂಡ ಎಚ್ಚೆತ್ತುಕೊಂಡಿದ್ದು, ನಮ್ಮ ಮೆಟ್ರೋ ಸುತ್ತಮುತ್ತ ಹಾಗೂ ಕಚೇರಿ ಸುತ್ತಮುತ್ತ ಸ್ವಚ್ಛತೆ ಕಾಪಾಡುವಂತೆ ಸೂಚನೆ ನೀಡಿದೆ.

ನಮ್ಮ ಮೆಟ್ರೋ ನಿಲ್ದಾಣದ ಆವರಣದಲ್ಲಿ, ಕಚೇರಿಯ ಸುತ್ತಮುತ್ತ ನಿಂತ ನೀರು , ಹಸಿ ಕಸ , ಸೊಳ್ಳೆ ಮೊಟ್ಟೆ ಶೇಖರಣೆ ಆಗುವಂತ ಪ್ರದೇಶಗಳಿದ್ದರೆ ಅವುಗಳನ್ನ ಸ್ವಚ್ಚಗೊಳಿಸಲು ಸೂಚನೆ ನೀಡಲಾಗಿದೆ. ಅಲ್ಲದೆ ನಿಲ್ದಾಣದಲ್ಲಿ ದಿನಕ್ಕೆ ಎರಡು ಬಾರಿ ಔಷಧಿ ಸಂಪಡಿಸುವುದನ್ನ ಕಡ್ಡಾಯಗೊಳಿಸಲಾಗಿದೆ.

ಈಗಾಗಲೇ ಮೆಟ್ರೋ ಸಿಬ್ಬಂದಿಗಳು ಕೂಡ ಔಷಧಿ ಸಿಂಪಡಣೆ ಮಾಡುತ್ತಿದ್ದಾರೆ. ಇದರ ಜತೆಗೆ ಸಿಬ್ಬಂದಿಯ ಆರೋಗ್ಯ ತಪಾಸಣೆಯನ್ನು BMRCL ಕಡ್ಡಾಯಗೊಳಿಸಿದೆ.

Tags:
error: Content is protected !!