ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜನರು ಆತಂಕದಲ್ಲೆ ಜೀವನ ನಡೆಸುತ್ತಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಓಡಾಟ ನಡೆಸಲು ಸಹ ಜನರು ಹೆದರಿಕೊಳ್ಳುತ್ತಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿ ಕೂಡ ಅಗತ್ಯ ಕ್ರಮಗಳನ್ನ ಕೈಗೊಳ್ಳುತ್ತಿದೆ.
ಇನ್ನು BMRCL ಕೂಡ ಎಚ್ಚೆತ್ತುಕೊಂಡಿದ್ದು, ನಮ್ಮ ಮೆಟ್ರೋ ಸುತ್ತಮುತ್ತ ಹಾಗೂ ಕಚೇರಿ ಸುತ್ತಮುತ್ತ ಸ್ವಚ್ಛತೆ ಕಾಪಾಡುವಂತೆ ಸೂಚನೆ ನೀಡಿದೆ.
ನಮ್ಮ ಮೆಟ್ರೋ ನಿಲ್ದಾಣದ ಆವರಣದಲ್ಲಿ, ಕಚೇರಿಯ ಸುತ್ತಮುತ್ತ ನಿಂತ ನೀರು , ಹಸಿ ಕಸ , ಸೊಳ್ಳೆ ಮೊಟ್ಟೆ ಶೇಖರಣೆ ಆಗುವಂತ ಪ್ರದೇಶಗಳಿದ್ದರೆ ಅವುಗಳನ್ನ ಸ್ವಚ್ಚಗೊಳಿಸಲು ಸೂಚನೆ ನೀಡಲಾಗಿದೆ. ಅಲ್ಲದೆ ನಿಲ್ದಾಣದಲ್ಲಿ ದಿನಕ್ಕೆ ಎರಡು ಬಾರಿ ಔಷಧಿ ಸಂಪಡಿಸುವುದನ್ನ ಕಡ್ಡಾಯಗೊಳಿಸಲಾಗಿದೆ.
ಈಗಾಗಲೇ ಮೆಟ್ರೋ ಸಿಬ್ಬಂದಿಗಳು ಕೂಡ ಔಷಧಿ ಸಿಂಪಡಣೆ ಮಾಡುತ್ತಿದ್ದಾರೆ. ಇದರ ಜತೆಗೆ ಸಿಬ್ಬಂದಿಯ ಆರೋಗ್ಯ ತಪಾಸಣೆಯನ್ನು BMRCL ಕಡ್ಡಾಯಗೊಳಿಸಿದೆ.
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…
ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ…
ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ…
ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ…
ವಿಶ್ವಸಂಸ್ಥೆ : ಇರಾನ್ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ…
ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…