ಬೆಂಗಳೂರು: ನಂದಿನಿ ತುಪ್ಪ ಕಲಬೆರಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ದಂಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಶಿವಕುಮಾರ್ ಹಾಗೂ ರಮ್ಯಾ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬೆಂಗಳೂರಿನ ನಂದಿನಿ ಪಾರ್ಲರ್‌ಗಳಿಗೆ ಈ ದಂಪತಿ ನಕಲಿ ನಂದಿನಿ ತುಪ್ಪ ಸರಬರಾಜು ಮಾಡುತ್ತಿದ್ದರು. ತಮಿಳುನಾಡಿನಲ್ಲಿ ಘಟಕ ಹೊಂದಿದ್ದ ದಂಪತಿ ರಾಜ್ಯದಲ್ಲಿ ಕಲಬೆರಕೆ ತುಪ್ಪ ತಯಾರಿಸಿ, ಪ್ಯಾಕೇಟ್ ಹಾಗೂ ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ಸರಬರಾಜು ಮಾಡುತ್ತಿದ್ದರು.
ಇದನ್ನು ಓದಿ:ನಕಲಿ ನಂದಿನಿ ತುಪ್ಪ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಶಿವಕುಮಾರ್ ಹಾಗೂ ರಮ್ಯಾ ದಂಪತಿಯನ್ನು ಬಂಧಿಸಿದ್ದು, ನಕಲಿ ತುಪ್ಪ ತಯಾರಿಸುವ ದೊಡ್ಡ ಅತ್ಯಾಧುನಿಕ ಯಂತ್ರವನ್ನೂ ವಶಕ್ಕೆ ಪಡೆದಿದ್ದಾರೆ.
ಅಲ್ಲದೇ 150 ಕೋಟಿ ಮೌಲ್ಯದ 8 ಸಾವಿರ ಲೀಟರ್ ನಕಲಿ ತುಪ್ಪ ಜಪ್ತಿ ಮಾಡಲಾಗಿದೆ. ಸದ್ಯ ಕಿಂಗ್‌ಪಿನ್ ದಂಪತಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.





