ರಾಜ್ಯ

ನಂದಿನಿ ತುಪ್ಪ ಕಲಬೆರಕೆ ಪ್ರಕರಣ: ದಂಪತಿ ಬಂಧನ

ಬೆಂಗಳೂರು: ನಂದಿನಿ ತುಪ್ಪ ಕಲಬೆರಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ದಂಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಶಿವಕುಮಾರ್‌ ಹಾಗೂ ರಮ್ಯಾ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬೆಂಗಳೂರಿನ ನಂದಿನಿ ಪಾರ್ಲರ್‌ಗಳಿಗೆ ಈ ದಂಪತಿ ನಕಲಿ ನಂದಿನಿ ತುಪ್ಪ ಸರಬರಾಜು ಮಾಡುತ್ತಿದ್ದರು. ತಮಿಳುನಾಡಿನಲ್ಲಿ ಘಟಕ ಹೊಂದಿದ್ದ ದಂಪತಿ ರಾಜ್ಯದಲ್ಲಿ ಕಲಬೆರಕೆ ತುಪ್ಪ ತಯಾರಿಸಿ, ಪ್ಯಾಕೇಟ್‌ ಹಾಗೂ ಪ್ಲಾಸ್ಟಿಕ್‌ ಬಾಟಲ್‌ಗಳಲ್ಲಿ ಸರಬರಾಜು ಮಾಡುತ್ತಿದ್ದರು.

ಇದನ್ನು ಓದಿ:ನಕಲಿ ನಂದಿನಿ ತುಪ್ಪ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ  

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಶಿವಕುಮಾರ್‌ ಹಾಗೂ ರಮ್ಯಾ ದಂಪತಿಯನ್ನು ಬಂಧಿಸಿದ್ದು, ನಕಲಿ ತುಪ್ಪ ತಯಾರಿಸುವ ದೊಡ್ಡ ಅತ್ಯಾಧುನಿಕ ಯಂತ್ರವನ್ನೂ ವಶಕ್ಕೆ ಪಡೆದಿದ್ದಾರೆ.

ಅಲ್ಲದೇ 150 ಕೋಟಿ ಮೌಲ್ಯದ 8 ಸಾವಿರ ಲೀಟರ್‌ ನಕಲಿ ತುಪ್ಪ ಜಪ್ತಿ ಮಾಡಲಾಗಿದೆ. ಸದ್ಯ ಕಿಂಗ್‌ಪಿನ್‌ ದಂಪತಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

3 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

3 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

3 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

3 hours ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

4 hours ago