Mysore
18
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಆಸ್ಟ್ರೇಲಿಯಾ, ಅಮೇರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೂ ನಂದಿನಿ ತುಪ್ಪ ರಫ್ತು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎಂಬುವರು ಅಮೆರಿಕಾದಲ್ಲಿ ನೆಲೆಸಿದ್ದು, ಇದರ ಏಜೆನ್ಸಿ ಪಡೆದಿದ್ದಾರೆ. ಕೆಎಂಎಫ್ ಹಾಗೂ ಕುಮಾರ ಅವರಿಗೆ ಶುಭವಾಗಲಿ ಎಂದು ಹಾರೈಸಿದರು.

ಇದನ್ನು ಓದಿ: ನಂದಿನಿ ಬ್ರ್ಯಾಂಡ್‌ ಹೆಸರಲ್ಲಿ ಕಲಬೆರಕೆ ತುಪ್ಪ ತಯಾರಿಕೆ ಬೃಹತ್‌ ಜಾಲ ಪತ್ತೆ..!

ಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ ಬಗ್ಗೆ ಮಾತನಾಡಿ ಹೈಕಮಾಂಡ್ ಅವರನ್ನು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ಎಂದು ನೋಡೋಣ ಎಂದರು. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು ಎಂದರು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸದ್ಯಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.

Tags:
error: Content is protected !!