ಬೆಂಗಳೂರು: ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎಂಬುವರು ಅಮೆರಿಕಾದಲ್ಲಿ ನೆಲೆಸಿದ್ದು, ಇದರ ಏಜೆನ್ಸಿ ಪಡೆದಿದ್ದಾರೆ. ಕೆಎಂಎಫ್ ಹಾಗೂ ಕುಮಾರ ಅವರಿಗೆ ಶುಭವಾಗಲಿ ಎಂದು ಹಾರೈಸಿದರು.
ಇದನ್ನು ಓದಿ: ನಂದಿನಿ ಬ್ರ್ಯಾಂಡ್ ಹೆಸರಲ್ಲಿ ಕಲಬೆರಕೆ ತುಪ್ಪ ತಯಾರಿಕೆ ಬೃಹತ್ ಜಾಲ ಪತ್ತೆ..!
ಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ ಬಗ್ಗೆ ಮಾತನಾಡಿ ಹೈಕಮಾಂಡ್ ಅವರನ್ನು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ಎಂದು ನೋಡೋಣ ಎಂದರು. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದು ಹೇಳಿದರು.
ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು ಎಂದರು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸದ್ಯಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.
ಕೆ.ಎಸ್.ಚಂದ್ರಶೇಖರ್‌ಮೂರ್ತಿ ಅರಮನೆಯಿಂದ ಪಂಜಿನ ಕವಾಯತುವರೆಗೂ ಅಂಗೈಯ ವೀಕ್ಷಣೆಗೆ ಅವಕಾಶ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ೨೦೨೬ರ ವರ್ಷದಲ್ಲಿ ಹತ್ತು ಹಲವು…
ನವೀನ್ ಡಿಸೋಜ ಅ.೨೦, ೨೧ರ ಕುರಿತು ಭಿನ್ನ ನಿರ್ಧಾರ; ದೇವಪ್ರಶ್ನೆ ಮೂಲಕ ಪರಿಹಾರಕ್ಕೆ ಕರಗ ಸೇವೆದಾರರ ಮನವಿ ಮಡಿಕೇರಿ: ಐತಿಹಾಸಿಕ…
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…