ಬೆಂಗಳೂರು: ರಾಜ್ಯದ ಜನತೆಗೆ ಶಾಕ್ ಮೇಲೆ ಶಾಕ್ ಎದುರಾಗಿದ್ದು, ರಾಜ್ಯ ಸರ್ಕಾರ ಈಗ ನಂದಿನಿ ಹಾಲಿನ ದರ ಏರಿಕೆ ಮಾಡುವ ಮೂಲಕ ಮತ್ತೆ ದೊಡ್ಡ ಶಾಕ್ ನೀಡಿದೆ.
ಬಸ್, ಮೆಟ್ರೋ ದರ ಏರಿಕೆ ಬಳಿಕ ಇದೀಗ ಹಾಲಿನ ದರ ಏರಿಕೆಯಾಗಿದ್ದು, ಜನತೆಗೆ ಬಿಗ್ ಶಾಕ್ ಎದುರಾಗಿದೆ.
ನಂದಿನಿ ಹಾಲಿನ ದರವನ್ನು ಪ್ರತೀ ಲೀಟರ್‌ಗೆ 4 ರೂ ಹೆಚ್ಚಳ ಮಾಡಲು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಬೆಲೆ ಏರಿಕೆ ಮಾಡುತ್ತಿದ್ದಂತೆ ರೊಚ್ಚಿಗೆದ್ದ ರಾಜ್ಯದ ಜನತೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಬೆಲೆ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.