Mysore
22
broken clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಟಿ20 ವಿಶ್ವಕಪ್‌ಗೆ ನಂದಿನಿ ಪ್ರಯೋಜಕತ್ವ

ಬೆಂಗಳೂರು: ಮುಂಬರುವ ಟಿ20 ವಿಶ್ವಕಪ್‌ ಪಂದ್ಯಕೂಟದಲ್ಲಿ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ಪ್ರಾಯೋಜಕತ್ವ ಒದಗಿಸಲಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಅಂತರಾಷ್ಟ್ರೀಯ ಕ್ರಿಕೆಟಿಗರ ಜರ್ಸಿಯಲ್ಲಿ ಭಾರತೀಯ ಭಾಷೆಯೊಂದನ್ನು ಪ್ರದರ್ಶಿಲಾಗುತ್ತಿದೆ.

ನಂದಿನಿ ಸ್ಕಾಟ್ಲೆಂಡ್‌ ಮತ್ತು ಐರ್ಲೆಂಡ್‌ ತಂಡಗಳ ಪ್ರಾಯೋಜಕತ್ವ ಪಡೆದಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು ಎಂದು ಬರೆದುಕೊಂಡಿದ್ದಾರೆ.

ನಂದಿನಿಯನ್ನು ಜಾಗತಿಕ ಬ್ರಾಂಡ್‌ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿ ವಿಶ್ವಕಪ್‌ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ ಎಂದು ಪೋಸ್ಟ್‌ ಮಾಡಿದ್ದಾರೆ.

ಕನ್ನಡದಲ್ಲಿ ನಂದಿನಿ ಲೋಗೋದೊಂದಿಗೆ ಜೆರ್ಸಿ ಬಿಡುಗಡೆ
2024ರ ಐಸಿಸಿ ಟಿ20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಭಾಗವಹಿಸುವ ಐರ್ಲೆಂಡ್‌ ಮತ್ತು ಸ್ಕಾಟ್ಲೆಂಡ್‌ನ ಆಟಗಾರರು ತಮ್ಮ ಲೀಡ್‌ ಆರ್ಮ್‌ನಲ್ಲಿ(ತೋಳಿನ ಮುಂಭಾಗ) ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಕರ್ನಾಟಕದ ಹಾಲು ಒಕ್ಕೂಟ್‌ ನಂದಿನಿಯ ಲಾಂಛನವಿರುವ ಜೆರ್ಸಿಯನ್ನು ಧರಿಸಿರುವಂತೆ ಲೋಗೋ ಬಿಡುಗಡೆ ಮಾಡಲಾಗಿದೆ.

Tags: