ಬೆಂಗಳೂರು: ಮುಂಬರುವ ಟಿ20 ವಿಶ್ವಕಪ್ ಪಂದ್ಯಕೂಟದಲ್ಲಿ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ಪ್ರಾಯೋಜಕತ್ವ ಒದಗಿಸಲಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಅಂತರಾಷ್ಟ್ರೀಯ ಕ್ರಿಕೆಟಿಗರ ಜರ್ಸಿಯಲ್ಲಿ ಭಾರತೀಯ ಭಾಷೆಯೊಂದನ್ನು ಪ್ರದರ್ಶಿಲಾಗುತ್ತಿದೆ.
ನಂದಿನಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು ಎಂದು ಬರೆದುಕೊಂಡಿದ್ದಾರೆ.
ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿ ವಿಶ್ವಕಪ್‌ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ ಎಂದು ಪೋಸ್ಟ್ ಮಾಡಿದ್ದಾರೆ.
ಕನ್ನಡದಲ್ಲಿ ನಂದಿನಿ ಲೋಗೋದೊಂದಿಗೆ ಜೆರ್ಸಿ ಬಿಡುಗಡೆ
2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾಗವಹಿಸುವ ಐರ್ಲೆಂಡ್ ಮತ್ತು ಸ್ಕಾಟ್ಲೆಂಡ್‌ನ ಆಟಗಾರರು ತಮ್ಮ ಲೀಡ್ ಆರ್ಮ್‌ನಲ್ಲಿ(ತೋಳಿನ ಮುಂಭಾಗ) ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಕರ್ನಾಟಕದ ಹಾಲು ಒಕ್ಕೂಟ್ ನಂದಿನಿಯ ಲಾಂಛನವಿರುವ ಜೆರ್ಸಿಯನ್ನು ಧರಿಸಿರುವಂತೆ ಲೋಗೋ ಬಿಡುಗಡೆ ಮಾಡಲಾಗಿದೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…