ರಾಜ್ಯ

ನಂಜುಂಡಸ್ವಾಮಿಯವರ ರೈತ ಹೋರಾಟ ನನಗೂ ರಾಜಕೀಯ ಪ್ರೇರಣೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು : ರೈತರು ನೀಡಿದ ಹಕ್ಕೊತ್ತಾಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ “ಭೂ ಸುಧಾರಣಾ ಕಾಯ್ದೆ 2020″ಕ್ಕೆ ತಿದ್ದುಪಡಿ ತರಲಾಗುವುದುಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ 88ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರೈತ ಸಮಾವೇಷವನ್ನು ಉದ್ಘಾಟಿಸಿದ ಬಳಿಕ ರೈತ ಪರ ಬಜೆಟ್ ರೂಪಿಸಲು ರೈಸ ಸಂಘ ನೀಡಿದ ಹಕ್ಕೊತ್ತಾಯಗಳನ್ನು ಸ್ವೀಕರಿಸಿ ಮಾತನಾಡಿದರು.

ನಂಜುಂಡಸ್ವಾಮಿಯವರು ಸಂಘಟಿಸಿದ ಸ್ಟಡಿ ಸರ್ಕಲ್ ಮೂಲಕ ಹಲವು ವಿಚಾರಗಳ ಒಳನೋಟ ದೊರೆಯಿತು. ಸಮಾಜವಾದಿ ಆರ್ಥಿಕತೆ, ಸಮಾಜವಾದಿ ರಾಜಕಾರಣದ ಬಗ್ಗೆ ಸ್ಪಷ್ಟತೆ ಸಿಕ್ಕಿತು. ಈ ಸ್ಟಡಿ ಸರ್ಕಲ್ ಗೆ ಬಹಳ ಮಂದಿ ಉಪನ್ಯಾಸಕರು, ಪ್ರೊಫೆಸರ್ ಗಳು, ಸಾಹಿತಿಗಳು ಬರುತ್ತಿದ್ದರು. ಇವರೆಲ್ಲರ ಮಸರ್ಗದರ್ಶನ ನನಗೆ ಅನುಕೂಲವಾಯಿತು ಎಂದರು.

ನಂಜುಂಡಸ್ವಾಮಿಯವರು ಕಡೆಯವರೆಗೂ ರೈತರ ಪರವಾಗಿ ಕ್ರಿಯಾಶೀಲವಾಗಿದ್ದರು. ಸಮಾಜವಾದಿ ಆಶಯಗಳ ಪರವಾಗಿದ್ದ ಇವರು ಬೆಳೆಸಿದ ರೈತ ಚಳವಳಿ ರೈತರ ಸಮಸ್ಯೆ ಪರಿಹಾರಕ್ಕೆ ಆಸರೆ ಆಯಿತು. ರೈತ ಹೋರಾಟ ಮತ್ತು ರೈತ ಸಮಾವೇಶಗಳಲ್ಲಿ ಭಾಗವಹಿಸುವುದು ನನಗೂ ಬಹಳ ಸಂತಸ ಮತ್ತು ಹೆಮ್ಮೆಯ ವಿಷಯ. ನಂಜುಂಡಸ್ವಾಮಿ ಮತ್ತು ರೈತ ಹೋರಾಟ ಸಮಾಜ ಮತ್ತು ಸರ್ಕಾರಗಳ ಮೇಲೆ ಪರಿಣಾಮ ಬೀರಿದೆ ಎಂದರು.

ನಂಜುಂಡಸ್ವಾಮಿಯವರ ರೈತ ಹೋರಾಟ ನನಗೆ ರಾಜಕೀಯ ಪ್ರೇರಣೆ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಬಡಗಲಾಪುರ ನಾಗೇಂದ್ರ ಅವರು ಅಧ್ಯಕ್ಷತೆ ವಹಿಸಿದ್ದ ರೈತ ಸಮಾವೇಶದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಆಳಂದ ಶಾಸಕ ಬಿ.ಆರ್. ಪಾಟೀಲ್, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ದಲಿತ ಮುಖಂಡ ಮಾವಳ್ಳಿ ಶಂಕರ್, ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸಂಚಾಲಕರಾದ ಕುಮಾರ್ ಸಮತಳ ಸೇರಿ ಹಲವು ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

andolanait

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

5 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

5 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

6 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

6 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

7 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

8 hours ago